HomeKarnatakaBREAKING NEWS: ಚನ್ನಗಿರಿ ಲಾಕಪ್ ಡೆತ್, ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ತನಿಖೆ ಸಿಐಡಿಗೆ

BREAKING NEWS: ಚನ್ನಗಿರಿ ಲಾಕಪ್ ಡೆತ್, ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ತನಿಖೆ ಸಿಐಡಿಗೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್, ಠಾಣೆಯ ಬಳಿ ದಾಂದಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ ಎಂದು ಹೇಳಿದ್ದಾರೆ.

ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಆದಿಲ್ ಎಂಬ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಸಂದರ್ಭದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದರು. ಇದು ಲಾಕಪ್ ಡೆತ್ ಎಂದು ಆರೋಪಿಸಿದ ಮೃತರ ಸಂಬಂಧಿಕರು ಮತ್ತು ಇತರರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳನ್ನು ಹಾನಿಗೊಳಿಸಿದ್ದರು. ಘಟನೆಯಲ್ಲಿ ಅನೇಕ ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular