HomeKarnatakaBREAKING: ನಿನ್ನೆಯಷ್ಟೇ ಸಿಐಡಿ ವಿಚಾರಣೆ ಎದುರಿಸಿದ್ದ ಯುವತಿ ಆತ್ಮಹತ್ಯೆ

BREAKING: ನಿನ್ನೆಯಷ್ಟೇ ಸಿಐಡಿ ವಿಚಾರಣೆ ಎದುರಿಸಿದ್ದ ಯುವತಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಪದ್ಮನಾಭನಗರದ ನಿವಾಸದಲ್ಲಿ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೋವಿ ನಿಗಮದ ಫಲಾನುಭವಿಗಳಿಗೆ ಮೆಟೀರಿಯಲ್ಸ್ ಗಳನ್ನು ಅವರು ಪೂರೈಕೆ ಮಾಡುತ್ತಿದ್ದರು. ಜೀವಾಗೆ ನೋಟಿಸ್ ಕೊಟ್ಟು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು. ನಿನ್ನೆಯಷ್ಟೇ ಮೃತ ಜೀವಾ ಸಿಐಡಿ ವಿಚಾರಣೆ ಎದುರಿಸಿದ್ದರು. ಭೋವಿ ನಿಗಮದಲ್ಲಿ ನಡೆದಿರುವ ಹಣದ ವ್ಯವಹಾರ ಸಂಬಂಧ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಇಂದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಜೀವಾ 11 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು ತನಿಖೆಗೆ ಕರೆದು ಕಿರುಕುಳ ನೀಡಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular