HomeLatest NewsBREAKING : ಬೆಂಗಳೂರಲ್ಲಿ ‘ಸಿನಿಮಾ ಸ್ಟೈಲ್’ ದರೋಡೆ : ಬೈಕ್ ಅಡ್ಡಗಟ್ಟಿ 31.38 ಲಕ್ಷ ದೋಚಿದ...

BREAKING : ಬೆಂಗಳೂರಲ್ಲಿ ‘ಸಿನಿಮಾ ಸ್ಟೈಲ್’ ದರೋಡೆ : ಬೈಕ್ ಅಡ್ಡಗಟ್ಟಿ 31.38 ಲಕ್ಷ ದೋಚಿದ ಗ್ಯಾಂಗ್.!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಖದೀಮರ ಅಟ್ಟಹಾಸ ಮಿತಿಮೀರಿದ್ದು, ಬನ್ನೇರುಘಟ್ಟ ಸಮೀಪ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಬೃಹತ್ ಮೊತ್ತದ ಹಣವನ್ನು ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ 31 ಲಕ್ಷದ 38 ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದೆ.

ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ವ್ಯಕ್ತಿಯೊಬ್ಬರು ತಮ್ಮ ಬೈಕ್ನಲ್ಲಿ 31,38,000 ರೂಪಾಯಿ ಹಣವನ್ನು ಇಟ್ಟುಕೊಂಡು ಹೋಗುತ್ತಿದ್ದಾಗ, ಬೈಕ್ಗಳಲ್ಲಿ ಬೆನ್ನಟ್ಟಿಕೊಂಡು ಬಂದ ದರೋಡೆಕೋರರ ಗ್ಯಾಂಗ್ ಏಕಾಏಕಿ ದಾರಿಯುದ್ದಕ್ಕೂ ಅಡ್ಡಗಟ್ಟಿದೆ.

‘ಸಿನಿಮಾ ಸ್ಟೈಲ್’ ನಲ್ಲಿ ಲಾಂಗ್ ಪ್ರದರ್ಶನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಭಯವಿಲ್ಲದೆ ಹಾಡಹಗಲೇ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿದ ಖದೀಮರು, ಸಿನಿಮಾ ಸ್ಟೈಲ್ನಲ್ಲಿ ಲಾಂಗ್ ಮತ್ತು ಮಚ್ಚುಗಳನ್ನು ತೋರಿಸಿ ವ್ಯಕ್ತಿಯನ್ನು ಬೆದರಿಸಿದ್ದಾರೆ. ಜೀವಭಯದಿಂದ ವ್ಯಕ್ತಿ ತತ್ತರಿಸುತ್ತಿದ್ದಂತೆ, ಹಣವಿದ್ದ ಬ್ಯಾಗ್ ಹಾಗೂ ಅವರ ಬೈಕನ್ನು ಸಹ ಕಿತ್ತುಕೊಂಡು ದರೋಡೆಕೋರರು ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular