HomeKarnatakaಸಿನಿಮಾ ಟಿಕೆಟ್ ಮೇಲೆ ಶೇ.2 ಸೆಸ್ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶ ರದ್ದು

ಸಿನಿಮಾ ಟಿಕೆಟ್ ಮೇಲೆ ಶೇ.2 ಸೆಸ್ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶ ರದ್ದು

ಬೆಂಗಳೂರು: ಸಿನಿಮಾ ಟಿಕೆಟ್ ಮೇಲೆ ಶೇ.2 ಸೆಸ್ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಸಿನಿಮಾ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ಯೋಜನೆಗಳಿಗೆ ಅನುದಾನ ಒದಗಿಸಲು ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ ಗಳಲ್ಲಿ ಸಿನೆಮಾ ಟಿಕೆಟ್‌ ದರದ ಮೇಲೆ ಕಡ್ಡಾಯವಾಗಿ ಶೇ.2ರಷ್ಟು ಸೆಸ್ ಸಂಗ್ರಹಿಸುವಂತೆ ಸೂಚಿಸಿ ಸರ್ಕಾರ ಹೊರಡಿಸಿದ್ದ ನೋಟಿಸ್‌ಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ಸೆಸ್ ಸಂಗ್ರಹ ಕುರಿತು ಆದೇಶ ಮತ್ತು ನೋಟಿಸ್ ನೀಡಿರುವುದನ್ನು ಪ್ರಶ್ನಿಸಿ ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್ ಆಫ್ ಇಂಡಿಯಾ, ಪಿವಿಆರ್‌ ಐನಾಕ್ಸ್ ಲಿಮಿಟೆಡ್‌ ಮತ್ತು ಇದರ ಷೇರುದಾರ ಶಂತನು ಪೈ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್‌.ಟಿ. ನರೇಂದ್ರಪ್ರಸಾದ್ ಅವರ ಪೀಠ ಈ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಪರ ವಕೀಲರು ಹಾಜರಾಗಿ, ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆದಿದೆ. ಅಲ್ಲದೆ, ಅಧಿನಿಯಮ ಜಾರಿಗೆ ಸಂಬಂಧಿಸಿ ಇಲ್ಲಿವರೆಗೆ ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಲಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಈ ಹೇಳಿಕೆ ಪರಿಗಣಿಸಿದ ನ್ಯಾಯಪೀಠ, ಕಾರ್ಮಿಕ ಇಲಾಖೆ ನೀಡಿರುವ ನೋಟಿಸ್‌ಗಳನ್ನು ರದ್ದುಪಡಿಸಿದೆ.

ವಿನೂತನ ಜನಸ್ನೇಹಿ ಕಾರ್ಯಕ್ರಮ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿ ನೂರು ದಿನಗಳಾದ ಈ ಸುಸಂದರ್ಭದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಹಲವು ಮಹತ್ವದ ಪ್ರಗತಿಯ ಹೆಜ್ಜೆಗಳನ್ನು ಇರಿಸಲಾಗಿದ್ದು, ವಿನೂತನ ಜನಸ್ನೇಹಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ಹೊಸ ಚೈತನ್ಯದೊಂದಿಗೆ, ಹೊಸ ಉತ್ಸಾಹದೊಂದಿಗೆ, ಹೊಸ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿರುವ ನಮ್ಮ ಸರ್ಕಾರವು ಮಣ್ಣಿನ ಮಕ್ಕಳ ನೆರವಿಗೆ ‘ಮುಖ್ಯಮಂತ್ರಿ ನೇಗಿಲ ಯೋಗಿ’ ಕಾರ್ಯಕ್ರಮ, ಶೈಕ್ಷಣಿಕ ಬಲವರ್ಧನೆಗೆ ಉಚಿತ ಬಸ್ ಪಾಸ್, ‘ಸಿಎಂ ವಿದ್ಯಾರ್ಥಿ ಹಸ್ತ’ದಂತಹ ಉತ್ತೇಜನಾತ್ಮಕ ಕಾರ್ಯಕ್ರಮ, ಯುವ ಸಬಲೀಕರಣಕ್ಕೆ ಉದ್ಯೋಗ ನಿಧಿ, ಭಾರತ್ ಜೋಡೋ ಸಂಘ, ತಂತ್ರಜ್ಞಾನ ಕ್ಷೇತ್ರದ ನಾಯಕತ್ವಕ್ಕಾಗಿ ಎಐ ವಿಶ್ವವಿದ್ಯಾಲಯ, ಗ್ಲೋಬಲ್ ಟೆಕ್ನಾಲಜಿ ಸೆಂಟರ್‌ಗಳು, ರಾಜ್ಯದ ಪ್ರಗತಿಗೆ ವೇಗ ನೀಡಲು ಉತ್ಪಾದನಾ ಕ್ಲಸ್ಟರ್‌ಗಳು, ಬಿಯಾಂಡ್ ಬೆಂಗಳೂರಿನಂತಹ ಕಾರ್ಯಕ್ರಮಗಳು, ಜನಸ್ಪಂದನೆಗಾಗಿ ಪ್ರಜಾಸೇವಾ ಕಾರ್ಯಕ್ರಮ- ಹೀಗೆ ಸರ್ವರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗಾಗಿ ನೂರು ದಿನಗಳಲ್ಲಿ ನೂರಾರು ಪ್ರಗತಿಯ ಹೆಜ್ಜೆಗಳನ್ನು ಇಡಲಾಗಿದೆ.

ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ರಾಜ್ಯದ ಗೃಹ ಇಲಾಖೆಯು #RISE ಕರ್ನಾಟಕ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಾದಕವಸ್ತುಗಳ ಪಿಡುಗಿನ ವಿರುದ್ಧ ಸಮರ ಸಾರಲಾಗಿದೆ. #ಬೇಡBRO ಎಂಬ ಜಾಗೃತಿಯ ಅಭಿಯಾನದ ಮೂಲಕ ಮಾದಕವಸ್ತುಗಳ ವಿರುದ್ಧ ಕಾರ್ಯಾಚರಣೆಗೆ ವಿಶೇಷ ಒತ್ತು ನೀಡಲಾಗಿದೆ.

2026ರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ 1,999 NDPS ಪ್ರಕರಣಗಳನ್ನು ದಾಖಲಿಸಿ, 807 ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.

ಸೈಬರ್ ವಂಚನೆಗೆ ಒಳಗಾದವರ ನೆರವಿಗಾಗಿ ವಿಶೇಷ ಸಹಾಯವಾಣಿ ತೆರೆಯಲಾಗಿದೆ. ಸಂಚಾರ ದಟ್ಟಣೆಯ ನಿರ್ವಹಣೆಗಾಗಿ ವಿಶೇಷ ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆಗಳನ್ನು ರಚಿಸಲಾಗುತ್ತಿದ್ದು, ಸ್ವಸ್ಥ ಮತ್ತು ಭಯಮುಕ್ತ ವಾತಾವರಣವನ್ನು ಖಾತರಿಪಡಿಸಲಾಗುವುದು.

ಭಾರತದ ಮೊದಲ ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ ವಹಿಸಲಾಗಿದೆ. AI ಶಿಕ್ಷಣ, AI ನೀತಿ, AI ಹಬ್, ಗ್ರೀನ್ ಡೇಟಾ ಸೆಂಟರ್ ನೀತಿ, ಡ್ರೋನ್ ಉನ್ನತಿ ಕೇಂದ್ರ, ಇವಿ ಉನ್ನತಿ ಕೇಂದ್ರಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರುವಂತಹ ಕಾರ್ಯಕ್ರಮಗಳಾಗಿವೆ. ನಮ್ಮ ಸರ್ಕಾರದ ನೂರು ದಿನಗಳ ಈ ಸಾಧನೆಗಳು ಮುಂದಿನ ದಿನಗಳಲ್ಲಿ ಇಮ್ಮಡಿಯಾದ ವೇಗದೊಂದಿಗೆ ಮುನ್ನಡೆಯಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular