ಬಳ್ಳಾರಿ : ಸಿಪೆಟ್ ಮೈಸೂರು ವತಿಯಿಂದ ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆ (ಪಿಎಮ್ಕೆವಿವೈ 4.0) ಅಡಿಯಲ್ಲಿ “ಮೆಷಿನ್ ಆಪರೇಟರ್ ಮತ್ತು ಪ್ರೋಗ್ರಾಮರ್–ಸಿಎನ್ಸಿ ಮಿಲ್ಲಿಂಗ್” ವಿಷಯದಲ್ಲಿ 3.1/2 ತಿಂಗಳ ಉಚಿತ ಕೌಶಲ್ಯ ತರಬೇತಿಗೆ ಪಿಯುಸಿ, ಐಟಿಐ, ಡಿಪ್ಲೋಮೊ, ಯಾವುದೇ ಪದವಿ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರಿನಲ್ಲಿರುವ ಕೇಂದ್ರ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಒಂದು ರಾಷ್ಟಿçÃಯ ಮಟ್ಟದ ಸಂಸ್ಥೆಯಾಗಿದೆ. ಭಾರತ ಸರ್ಕಾರದ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ, ರಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಮತ್ತು ಪಾಲಿಮರ್ ಸಂಬಂಧಿತ ಕೈಗಾರಿಕೆಗಳಿಗೆ ವಿಶ್ವದಾದ್ಯಂತ ಕೌಶಲ್ಯಯುತ ತಾಂತ್ರಿಕ ಸಿಬ್ಬಂದಿಯನ್ನು ತಯಾರಿಸುವಲ್ಲಿ ಸಿಪೆಟ್ ಪ್ರಮುಖ ಪಾತ್ರವಹಿಸುತ್ತಿದೆ.
ತರಬೇತಿಯು ಅಕ್ಟೋಬರ್ 23 ರಿಂದ ಪ್ರಾರಂಭವಾಗುತ್ತಿದ್ದು, ಉಚಿತ ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ. ತರಬೇತಿಗೆ ದಾಖಲಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ನೇಮಕಾತಿಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಮೊ.9480253024, 9741719645 ಗೆ ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಧಾನ ನಿರ್ದೇಶಕ ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.