HomeLatest News'ಸಿಪೆಟ್' ಮೈಸೂರು ಉದ್ಯೋಗಾದಾರಿತ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ' : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

‘ಸಿಪೆಟ್’ ಮೈಸೂರು ಉದ್ಯೋಗಾದಾರಿತ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ’ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 14 ರ ವರೆಗೆ ವಿಸ್ತರಿಸಲಾಗಿದೆ.

*ಕೋರ್ಸ್:*

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ – 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ– 3 ವರ್ಷ ಕೋರ್ಸ್.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು, ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಸಂಬAಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ಡಿಪ್ಲೋಮಾ ದ ಕೊನೆಯ ಸೆಮಿಸ್ಟರ್ ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.

ಮಾಹಿತಿಗಾಗಿ ಆನ್‌ಲೈನ್ ವೆಬ್‌ಸೈಟ್ www.cipet.gov.in ಅಥವಾ ದೂ.0821-2510618, ಮೊ.9480253024, 9791431827 ಗೆ ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಧಾನ ನಿರ್ದೇಶಕ ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular