HomeKarnatakaರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಪದವಿ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಫಲಕ ಅಳವಡಿಸಲು ಸುತ್ತೋಲೆ

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಪದವಿ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಫಲಕ ಅಳವಡಿಸಲು ಸುತ್ತೋಲೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತ ಸಂವಿಧಾನದ ಪೀಠಿಕೆಯ ಫಲಕ ಅಳವಡಿಸಲು ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತೆ ನಮ್ಮ ಸಂವಿಧಾನಕ್ಕೆ ಪೀಠಿಕೆ ಆತ್ಮವಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ದೇಶದ ಪ್ರತಿ ಪ್ರಜೆ ಭಾರತದ ಸಂವಿಧಾನದ ಆಶಯಗಳನ್ನು ಅರಿಯುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಕಾನೂನು ಇಲಾಖೆ ಕೇಂದ್ರದಿಂದ ಸಂವಿಧಾನ ಪೀಠಿಕೆ ಖರೀದಿಸಿ ಕಾಲೇಜಿನಲ್ಲಿ ಫಲಕ ಪ್ರಕಟಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ. ಸಂವಿಧಾನದ ಅಮೃತ ಮಹೋತ್ಸವದ ಅಂಗವಾಗಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಚಿಕ್ಕಟ್ಟಿ ಕೃಷಿ ರೈತ ಉತ್ಪಾದಕರ ಸಂಘದ ವತಿಯಿಂದ ನೀಡಿದ ಪ್ರಸ್ತಾವನೆಯ ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular