HomeIndiaನಟಿ, ನೂತನ ಸಂಸದೆ ಕಂಗನಾ ರನೌತ್ ಗೆ ಕಪಾಳಮೋಕ್ಷ ಮಾಡಿದ CISF ಕಾನ್ ಸ್ಟೆಬಲ್ ಸಸ್ಪೆಂಡ್

ನಟಿ, ನೂತನ ಸಂಸದೆ ಕಂಗನಾ ರನೌತ್ ಗೆ ಕಪಾಳಮೋಕ್ಷ ಮಾಡಿದ CISF ಕಾನ್ ಸ್ಟೆಬಲ್ ಸಸ್ಪೆಂಡ್

ನವದೆಹಲಿ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ನೂತನ ಸಂಸದೆ ಕಂಗನಾ ರನೌತ್‌ ಗೆ ಕಪಾಳಮೋಕ್ಷ ಮಾಡಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಮಹಿಳಾ ಕಾನ್‌ಸ್ಟೆಬಲ್ ಕುಲವಿಂದರ್ ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕುಲವಿಂದರ್ ಕೌರ್ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರು, ಬಾಲಿವುಡ್ ನಟಿ ಕಂಗನಾ ರನೌತ್ ಬಗ್ಗೆ ಮಾತನಾಡುವ ವಿಡಿಯೋ ಕೂಡ ಕಾಣಿಸಿಕೊಂಡಿದೆ.

ರೈತರ ಆಂದೋಲನದಲ್ಲಿ ಭಾಗವಹಿಸುವ ಮಹಿಳೆಯರು ತಲಾ 100 ರೂಪಾಯಿಗಾಗಿ ಹೋಗುತ್ತಾರೆ ಎಂದು ಕಂಗನಾ ರನೌತ್ ಈ ಹಿಂದೆ ಹೇಳಿಕೆ ನೀಡಿದ್ದರು. ಆ ಸಮಯದಲ್ಲಿ ರೈತರ ಆಂದೋಲನದಲ್ಲಿ ಭಾಗಿಯಾಗಿದ್ದ ಮಹಿಳೆಯರಲ್ಲಿ ತನ್ನ ತಾಯಿಯೂ ಇದ್ದರು ಎಂದು ಕೌರ್ ವೀಡಿಯೊದಲ್ಲಿ ಹೇಳಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಅವರು ಕಂಗನಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಲವಿಂದರ್ ಕೌರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular