ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದ ಒಳ ಆವರಣದಲ್ಲಿ ಗೇಟ್ ಬಿದ್ದು ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ಒಳ ಆವರಣದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಶೇಖರ್ ಭೀಮರಾವ್ ಜಗದಾಳೆ(48) ಗೇಟ್ ಮುರಿದುಬಿದ್ದು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಮಹಿಮಾನಗಢದವರಾದ ಶೇಖರ್ ಭೀಮರಾವ್ ಶನಿವಾರ ರಾತ್ರಿ ಅಣು ತ್ಯಾಜ್ಯ ಘಟಕದ ಬಳಿ ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಕಬ್ಬಿಣದ ದೊಡ್ಡ ಗೇಟ್ ಅವರ ಮೇಲೆ ಮುರಿದು ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
