ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: ವಾರಕ್ಕೆ ಒಂದು ದಿನ ರಜೆ ನೀಡಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ನೀಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಪೌರಕಾರ್ಮಿಕರಿಗೆ ಪ್ರಸ್ತುತ ವಾರಕ್ಕೆ ಎರಡು ಬಾರಿ ಅರ್ಧ ದಿನ ರಜೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದರ ಬದಲಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ಘೋಷಿಸಲು ಸರ್ಕಾರ ಅನುಮೋದನೆ ನೀಡಿದೆ. ನಿತ್ಯ ಸ್ವಚ್ಛತಾ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಶೇಕಡ 85ರಷ್ಟು ಹಾಜರಾತಿ ಖಚಿತಪಡಿಸಿಕೊಂಡು ಒಂದು ದಿನ ವಾರದ ರಜೆ ನೀಡಬೇಕು. ಇದೇ ವೇಳೆ ಬೇರೊಬ್ಬರನ್ನು ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಬೇಕು. ವಾರದ ರಜೆಯನ್ನು ನೌಕರರು, ಪೌರ ಕಾರ್ಮಿಕರು ಹಕ್ಕು ಎಂದು ಪರಿಗಣಿಸುವಂತಿಲ್ಲ. ವಾರದ ರಜೆಯನ್ನು ಮುಂದಿನ ವಾರಕ್ಕೆ ಹಿಂಬಾಕಿ ಎಂದು ಪರಿಗಣಿಸಿ ಸತತವಾಗಿ ರಜೆ ಪಡೆಯುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಪ್ರಕೃತಿ ವಿಕೋಪ, ಸ್ಥಳೀಯ ಜಾತ್ರೆ, ಸಭೆ, ಸಮಾರಂಭಗಳ ವಿಶೇಷ ಸಂದರ್ಭದಲ್ಲಿ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಒತ್ತಾಯಿಸುವಂತಿಲ್ಲ. ರಜೆ ಮೇಲೆ ತೆರಳಿದ ನೌಕರ, ಪೌರ ಕಾರ್ಮಿಕರ ವ್ಯಾಪ್ತಿಗೆ ಸೇರಿದ ಪ್ರದೇಶದ ಸ್ವಚ್ಛತಾ ಕಾರ್ಯವನ್ನು ಸಾರ್ವಜನಿಕರಿಗೆ ತೊಂದರೆ ಆಗದಂತೆ ಕೆಲಸಕ್ಕೆ ಹಾಜರಾದ ಇತರೆ ಸಿಬ್ಬಂದಿಯಿಂದ ಸ್ವಚ್ಛಗೊಳಿಸಬೇಕು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read