ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: ‘ಗೃಹಭಾಗ್ಯ’ ಯೋಜನೆಯಡಿ ವಸತಿ ಸೌಲಭ್ಯ

ಮಡಿಕೇರಿ: ನಗರಸಭೆ ವ್ಯಾಪ್ತಿಯ ಕರ್ಣಂಗೇರಿ ಗ್ರಾಮ ಬಳಿಯ ಉಕ್ಕುಡದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಬುಧವಾರ ಚಾಲನೆ ನೀಡಿದರು.

ಗೃಹಭಾಗ್ಯ ಯೋಜನೆಯಡಿ ತಲಾ 7.50 ಲಕ್ಷ ರೂ. ವೆಚ್ಚದಲ್ಲಿ 12 ಮನೆಗಳಿಗೆ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ  ನೆಲಮಹಡಿ ಸೇರಿ ಮೂರು ಅಂತಸ್ತಿನ ಹನ್ನೆರಡು ಮನೆಗಳನ್ನು ಒಳಗೊಂಡ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರ ಪೌರಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಿದೆ. ಸರ್ಕಾರ ಎಲ್ಲಾ ವರ್ಗದ ಜನರಿಗೆ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಿದೆ. ಆ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಆದ್ಯತೆ ಮೇಲೆ ವಸತಿ ಹಾಗೂ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಪೌರಕಾರ್ಮಿಕರು ಪ್ರತಿ ನಿತ್ಯ ನಗರ ಪಟ್ಟಣ ಪ್ರದೇಶದಲ್ಲಿ ಸ್ವಚ್ಛತೆಗೆ ದುಡಿಯುತ್ತಾರೆ. ಇವರಿಗೆ ಮೂಲಸೌಲಭ್ಯ ಕಲ್ಪಿಸುವುದು ಹೆಚ್ಚಿನ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಶೀಘ್ರ ಮನೆ ನಿರ್ಮಾಣದ ಕಾಮಗಾರಿ ಆರಂಭಿಸಿ, ಪೂರ್ಣಗೊಳಿ¸ಬೇಕು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read