ಪ್ರಾದೇಶಿಕ ಭಾಷೆಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪು: ಸಿಜೆಐ ಪ್ರಯತ್ನಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಒತ್ತು ನೀಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ.

ಇತ್ತೀಚಿನ ಸಮಾರಂಭವೊಂದರಲ್ಲಿ, ಗೌರವಾನ್ವಿತ ಸಿಜೆಐ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಪ್ರಾದೇಶಿಕ ಭಾಷೆಗಳಲ್ಲಿ ಎಸ್‌ಸಿ ತೀರ್ಪುಗಳು ಲಭ್ಯವಾಗುವಂತೆ ಕೆಲಸ ಮಾಡುವ ಅಗತ್ಯತೆಯ ಕುರಿತು ಮಾತನಾಡಿದರು. ಅದಕ್ಕೆ ತಂತ್ರಜ್ಞಾನವನ್ನೂ ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಇದು ಶ್ಲಾಘನೀಯ ಚಿಂತನೆಯಾಗಿದೆ, ಇದು ಅನೇಕ ಜನರಿಗೆ, ವಿಶೇಷವಾಗಿ ಯುವಕರಿಗೆ ಸಹಾಯ ಮಾಡುತ್ತದೆ ಎಂದು ಪಿಎಂ ಮೋದಿ ಟ್ವಿಟರ್‌ ನಲ್ಲಿ ಬರೆದಿದ್ದಾರೆ.

ಭಾರತವು ಹಲವಾರು ಭಾಷೆಗಳನ್ನು ಹೊಂದಿದೆ, ಅದು ನಮ್ಮ ಸಾಂಸ್ಕೃತಿಕ ಕಂಪನ್ನು ಹೆಚ್ಚಿಸುತ್ತದೆ. ಒಬ್ಬರ ಮಾತೃ ಭಾಷೆಯಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯದಂತಹ ವಿಷಯಗಳನ್ನು ಅಧ್ಯಯನ ಮಾಡುವ ಆಯ್ಕೆಯನ್ನು ನೀಡುವುದು ಸೇರಿದಂತೆ ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಹಲವಾರು ಪ್ರಯತ್ನಗಳನ್ನು ಕೈಗೊಳ್ಳುತ್ತಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮುಂಬೈನಲ್ಲಿ ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಜೆಐ ಮಾಡಿದ ಭಾಷಣದ ಸಂಬಂಧಿತ ಕ್ಲಿಪ್ ಅನ್ನು ಅವರು ಸೈಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನ ಮಂತ್ರಿಗಳು ಈ ಹಿಂದೆ ಪ್ರಾದೇಶಿಕ ಭಾಷೆಗಳಲ್ಲಿ ನ್ಯಾಯಾಂಗ ತೀರ್ಪುಗಳನ್ನು ಲಭ್ಯವಾಗುವಂತೆ ಮಾಡುವ ಮೂಲಕ ಸಾಮಾನ್ಯ ಜನರಿಗೆ ಹೆಚ್ಚು ಪ್ರವೇಶಿಸುವಂತೆ ಮಾಡಲು ಒತ್ತು ನೀಡಬೇಕೆಂದು ಹೇಳಿದ್ದಾರೆ.

https://twitter.com/narendramodi/status/1617114697228234753

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read