HomeLatest Newsನನಗೆ ಟೈಫಾಯ್ಡ್ ಧೃಢಪಟ್ಟಿದೆ; ಆದರೂ ಪ್ರತಿಭಟನೆ ನಿಲ್ಲುವುದಿಲ್ಲ: ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸಲ್ಲ ಎಂದ...

ನನಗೆ ಟೈಫಾಯ್ಡ್ ಧೃಢಪಟ್ಟಿದೆ; ಆದರೂ ಪ್ರತಿಭಟನೆ ನಿಲ್ಲುವುದಿಲ್ಲ: ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸಲ್ಲ ಎಂದ ಅಭಿಜಿತ್ ದೀಪ್ಕೆ

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರಿಗೆ ಟೈಫಾಯ್ಡ್ ದೃಢಪಟ್ಟಿದೆ. ಆದಾಗ್ಯೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ವೀಡಿಯೊ ಸಂದೇಶ ಹಂಚಿಕೊಂಡಿರುವ ಅಭೀಜಿತ್ ದೀಪ್ಕೆ, ನನಗೆ ಟೈಫಾಯ್ಡ್ ಧೃಢವಾಗಿದೆ. ಆದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮ ಅನಾರೋಗ್ಯದ ಸ್ಥಿತಿ ಪ್ರಸ್ತುತ ನಡೆಯುತ್ತಿರುವ ಹೋರಾಟದ ಮೇಲೆ ಯಾವುದೇ ಪರಿಣಾಮ ಬೀರಲಾರದು ಎಂದು ತಿಳಿಸಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಯಶಸ್ವಿಯಾಗಿರುವುದಕ್ಕೆ ಬೆಂಬಲಿಗರು ಮತ್ತು ಪ್ರತಿಭಟನಾಕಾರರಿಗೆ ದೀಪ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ನನಗೆ ಟೈಫಾಯ್ಡ್ ಇರುವುದು ದೃಢಪಟ್ಟಿದೆ. ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ದೇಶಾದ್ಯಂತ ಅತ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ, ಈ ಚಳವಳಿಯನ್ನು ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಹಾಗೂ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ತಮ್ಮ 26 ದಿನಗಳ ಸುದೀರ್ಘ ಉಪವಾಸ ಮುಷ್ಕರವನ್ನು ಹಿಂಪಡೆದಿರುವುದಕ್ಕೆ ಅಭೀಜಿತ್ ದೀಪ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸೋನಮ್ ವಾಂಗ್ಚು ಕ್ ಸರ್ ತಮ್ಮ ಉಪವಾಸ ಹಿಂಪಡೆದಿರುವುದು ನಮಗೆ ತೀವ್ರ ಸಮಾಧಾನ ತಂದಿದೆ. ಆದರೆ, ಪರೀಕ್ಷಾ ಅಕ್ರಮಗಳ ವಿರುದ್ಧ ಹೊಣೆಗಾರಿಕೆ ನಿಗದಿಪಡಿಸುವ ನಮ್ಮ ಬೇಡಿಕೆ ಜೀವಂತವಾಗಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಿಜೆಪಿ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular