HomeCrimeವಸತಿ ಶಾಲೆ ವಿದ್ಯಾರ್ಥಿ ಆತ್ಮಹತ್ಯೆ: ಶಾಲೆಗೆ ನ್ಯಾಯಾಧೀಶರ ಭೇಟಿ

ವಸತಿ ಶಾಲೆ ವಿದ್ಯಾರ್ಥಿ ಆತ್ಮಹತ್ಯೆ: ಶಾಲೆಗೆ ನ್ಯಾಯಾಧೀಶರ ಭೇಟಿ

ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದ ಡಿ.ವಿ.ಎಸ್. ವಸತಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕೊಟ್ರೇಶ್ (16) ಆತ್ಮಹತ್ಯೆ ಮಾಡಿಕೊಂಡಿದ್ದ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕರಿಯಮ್ಮನಹಳ್ಳಿ ಗ್ರಾಮದ ನಿವಾಸಿ ಗುರುಲಿಂಗಪ್ಪ ಎಂಬುವವರ ಪುತ್ರ ಕೋಟೇಶ್ ಫೆ.16 ಸೋಮವಾರ ಬೆಳಗ್ಗೆ ಸುಮಾರು 7:14ಕ್ಕೆ ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಸಂಬಂಧ ಭರಮಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಆತ್ಮಹತ್ಯೆ ಮಾಡಿಕೊಂಡ ಸ್ಥಳವನ್ನು ವೀಕ್ಷಿಸಿ, ಶಾಲೆಯ ಮುಖ್ಯಸ್ಥರು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲೆಯ ಕೊಠಡಿಗಳು, ವಿದ್ಯಾರ್ಥಿಗಳಿಗೆ ನೀಡಿರುವ ಮೂಲಭೂತ ಸೌಕರ್ಯ ಹಾಗೂ ಸಂಸ್ಥೆಯ ಕಡತಗಳು ಮತ್ತು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಶಾಲಾ ಆಡಳಿತ ಮಂಡಳಿಯಲ್ಲಿ ಕಂಡುಬಂದ ಕೆಲವು ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಿಕೊಳ್ಳುವಂತೆ ನ್ಯಾಯಾಧೀಶ ಎಂ.ವಿಜಯ್ ಶಾಲೆಯ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ.ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಹೆಚ್.ಎನ್, ಮಕ್ಕಳ ರಕ್ಷಣಾ ಘಟದ ಉಪಸಮನ್ವಯಾಧಿಕಾರಿ ಹನುಮಂತಪ್ಪ.ಬಿ.ಎಂ. ಉಪಸ್ಥಿತರಿದ್ದರು.

ಆತ್ಮಹತ್ಯೆ ತಡೆ ಸಹಾಯವಾಣಿ: 14416 ಭಾರತದ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿ-ಮಾನಸ್. ದಿನದ 24 ಗಂಟೆಯೂ ಲಭ್ಯವಿರುವ ಉಚಿತ ಮತ್ತು ಟೋಲ್-ಫ್ರೀ ಸಹಾಯವಾಣಿಯಾಗಿದ್ದು, ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಬೆಂಬಲ ನೀಡುತ್ತದೆ.

ಒತ್ತಡ, ಆತಂಕ, ಖಿನ್ನತೆ, ವ್ಯಸನ ಮುಕ್ತತೆ ಸಮಸ್ಯೆಗಳಂತಹ ವಿಷಯಗಳಿಗಾಗಿ ಇದು ಜನರನ್ನು ತರಬೇತಿ ಪಡೆದ ಆಪ್ತ ಸಮಾಲೋಚಕರೊಂದಿಗೆ ಸಂಪರ್ಕಿಸುತ್ತದೆ. ಇದು ದೇಶದ ವಿವಿಧ ಭಾಷೆಗಳಲ್ಲಿ ತಕ್ಷಣದ ಸಹಾಯವನ್ನು ಒದಗಿಸುತ್ತದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular