HomeIndiaವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ವಸತಿ ಶಾಲೆ ಮಾಲೀಕ, ಆತನ ಸೋದರ ಅರೆಸ್ಟ್

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ವಸತಿ ಶಾಲೆ ಮಾಲೀಕ, ಆತನ ಸೋದರ ಅರೆಸ್ಟ್

ಟಿಕಮ್‌ ಗಢ: ಮಧ್ಯಪ್ರದೇಶದ ಟಿಕಮ್‌ ಗಢ ಜಿಲ್ಲೆಯ ವಸತಿ ಶಾಲೆಯಲ್ಲಿ 4ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಾಲೆಯ ಮಾಲೀಕ, ಆತನ ಸಹೋದರನನ್ನು ಬಂಧಿಸಲಾಗಿದೆ.

ವಸತಿ ಶಾಲೆಯ ಮಾಲೀಕ ಮತ್ತು ಆತನ ಸಹೋದರ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಕೇಂದ್ರದಿಂದ 40 ಕಿಮೀ ದೂರದಲ್ಲಿರುವ ಭಟೋಗ್ರಾ ಗ್ರಾಮದಲ್ಲಿ 1 ರಿಂದ 6 ನೇ ತರಗತಿಯ ಸುಮಾರು 30 ವಿದ್ಯಾರ್ಥಿಗಳಿರುವ ವಸತಿ ಶಾಲೆಯನ್ನು ಅಕ್ರಮವಾಗಿ ನಡೆಸಲಾಗುತ್ತಿದೆ ಎಂದು ಖರ್ಗಾಪುರ ಪೊಲೀಸ್ ಠಾಣೆ ಪ್ರಭಾರಿ ನಿತೇಶ್ ಜೈನ್ ಹೇಳಿದ್ದಾರೆ.

ಸೋದರಸಂಬಂಧಿಯೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಆಧಾರದ ಮೇಲೆ ಪೊಲೀಸರು ಶನಿವಾರ ಇಬ್ಬರು ಆರೋಪಿಗಳನ್ನು ಐಪಿಸಿ, ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ಸಂತ್ರಸ್ತೆಯ ಪೋಷಕರು ಬೇರೆ ನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ಶಾಲೆಯ ಹಾಸ್ಟೆಲ್‌ ನಲ್ಲಿ ವಾಸಿಸುತ್ತಿದ್ದಳು, ಆಕೆಯ ಸೋದರಸಂಬಂಧಿ ಕೂಡ ಸಂಸ್ಥೆಯಲ್ಲಿ ವಾಸಿಸುತ್ತಿದ್ದಾರೆ. ಮಾಲೀಕನ ಸಹೋದರ ಕೂಡ ಸಂತ್ರಸ್ತೆಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular