Shocking: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಶಾಲೆಯ ಪ್ಯೂನ್ ಸೇರಿದಂತೆ ನಾಲ್ವರಿಂದ ಕುಕೃತ್ಯ

5 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೇಲೆ 54 ವರ್ಷದ ಶಾಲಾ ಸಹಾಯಕ ಸೇರಿದಂತೆ ಆತನ ಗ್ಯಾಂಗ್ ಅತ್ಯಾಚಾರವೆಸಗಿದೆ. ದೆಹಲಿ ಎಂಸಿಡಿ ನಡೆಸುತ್ತಿರುವ ಶಾಲೆಯಲ್ಲಿ ಇಂತಹ ಬೆಚ್ಚಿಬೀಳಿಸುವ ಘಟನೆ ನಡೆದಿದೆ.

ಕೃತ್ಯದಲ್ಲಿ ಭಾಗಿಯಾದ ಅಜಯ್ ಎಂದು ಗುರುತಿಸಲಾದ ಪ್ಯೂನ್ ಅನ್ನು ಬಂಧಿಸಲಾಗಿದೆ. ಆತನ ಮೂವರು ಸಹಚರರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶದ ಜೌನ್‌ಪುರ ಮೂಲದ ಅಜಯ್ ಕಳೆದ 10 ವರ್ಷಗಳಿಂದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಯಲ್ಲಿ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದ.

ಘಟನೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ನಗರ ಪೊಲೀಸರು ಮತ್ತು ಎಂಸಿಡಿಗೆ ನೋಟಿಸ್ ಜಾರಿ ಮಾಡಿದೆ.

ತಕ್ಷಣ ಕ್ರಮ ಕೈಗೊಳ್ಳದಿರುವ ಕಾರಣ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ತರಗತಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಎಂಸಿಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಪೊಲೀಸರ ಪ್ರಕಾರ ಘಟನೆ ಮಾರ್ಚ್ 14 ರಂದು ನಡೆದಿದೆ. ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು ಮತ್ತು ತನ್ನ ಅಂತಿಮ ಪರೀಕ್ಷೆಯನ್ನು ಸಹ ತಪ್ಪಿಸಿದ್ದಳು.

ತರಗತಿ ಶಿಕ್ಷಕಿ ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಗೈರುಹಾಜರಾಗಿರುವ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಆಕೆಯ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಆರೋಪಿಯು ಬಾಲಕಿಯನ್ನು ಶಾಲೆಯಿಂದ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಮಾದಕವಸ್ತು ನೀಡಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read