ಕ್ರೀಡಾಕೂಟದ ವೇಳೆ ವಿದ್ಯಾರ್ಥಿನಿ ಅಪಹರಿಸಿ ಗ್ಯಾಂಗ್ ರೇಪ್: ವಿಡಿಯೋ ಬಹಿರಂಗವಾದ ನಂತರ ಘಟನೆ ಬೆಳಕಿಗೆ

ಗುರುಗ್ರಾಮ್‌ ನ ಸೋಹ್ನಾ ಪ್ರದೇಶದ ಶಾಲೆಯಿಂದ 14 ವರ್ಷದ ಬಾಲಕಿಯನ್ನು ಅಪಹರಿಸಿ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಸಂತ್ರಸ್ತೆಯ ತಂದೆ ನೀಡಿದ ದೂರಿನ ಪ್ರಕಾರ, ಕಳೆದ ವರ್ಷ ಡಿಸೆಂಬರ್ 18 ರಂದು ಕ್ರೀಡಾ ಕಾರ್ಯಕ್ರಮದ ವೇಳೆ 8 ನೇ ತರಗತಿಯ ತನ್ನ ಮಗಳನ್ನು ಶಾಲೆಯಿಂದ ಮೂವರು ಯುವಕರು ಅಪಹರಿಸಿ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಅಲ್ಲದೇ ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಮೂವರು ಆರೋಪಿಗಳು ಬಾಲಕಿಯ ಆಕ್ಷೇಪಾರ್ಹ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್‌ಗಳು ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವನ್ನು ಹರಿಬಿಟ್ಟಿದ್ದಾರೆ. ಆರೋಪಿಗಳನ್ನು ಗುರುತಿಸಲಾಗಿದೆ. ಆದರೆ, ಅವರು ತಲೆಮರೆಸಿಕೊಂಡಿರುವ ಕಾರಣ ಅವರನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯನ್ನು ಬಾಲಕಿ ಇಲ್ಲಿಯವರೆಗೆ ಯಾರಿಗೂ ಬಹಿರಂಗಪಡಿಸಿಲ್ಲ ಎಂದು ಸಂತ್ರಸ್ತೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ, ಆದರೆ ಶನಿವಾರ, ಅವರು ವಿಡಿಯೋ ಹರಿದಾಡಿದ ಬಗ್ಗೆ ತಿಳಿದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಇಬ್ಬರು ಆರೋಪಿಗಳು 11 ಮತ್ತು 12 ನೇ ತರಗತಿಯಲ್ಲಿ ಓದುತ್ತಿರುವ ಮತ್ತೊಂದು ಶಾಲೆಯ ವಿದ್ಯಾರ್ಥಿಗಳಾಗಿದ್ದು, ಮೂರನೆಯವರು ಶಾಲೆಯನ್ನು ತೊರೆದಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಪಿಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಉಪಾಸನಾ ಸಿಂಗ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read