ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಬಯಲಾಯ್ತು ಸೋದರ ಸಂಬಂಧಿಯಿಂದ ಬಾಲಕಿ ಗರ್ಭಿಣಿಯಾದ ಕೃತ್ಯ

ಭೋಪಾಲ್(ಮಧ್ಯಪ್ರದೇಶ): 8ನೇ ತರಗತಿ ಓದುತ್ತಿರುವ 13 ವರ್ಷದ ಬಾಲಕಿ ಹೊಟ್ಟೆನೋವು ಎಂದು ಹೇಳಿದ್ದು, ವೈದ್ಯಕೀಯ ತಪಾಸಣೆಯ ವೇಳೆ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ರಾತಿಬಾದ್ ಪೊಲೀಸರು ಆಕೆಯ ದೂರದ ಸೋದರ ಸಂಬಂಧಿಯನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ. ರಾತಿಬಾದ್ ಪ್ರದೇಶದ ಸಮೀಪವಿರುವ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ನಾಲ್ಕು ತಿಂಗಳಿನಿಂದ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮತ್ತು ಆತನನ್ನು ಹಿಡಿಯಲು ಬೇಟೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಗೆ ಎರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಕೆಯ ಪೋಷಕರು ಮಂಗಳವಾರ ರಾತ್ರಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ತಪಾಸಣೆ ವೇಳೆ ವೈದ್ಯರು ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಆಕೆಯ ಪೋಷಕರು ವಿಚಾರಿಸಿದಾಗ ತನ್ನ ದೂರದ ಸಹೋದರ ಕಳೆದ ನಾಲ್ಕು ತಿಂಗಳಿನಿಂದ ತನ್ನ ಮನೆಗೆ ಬಂದು ತನ್ನ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಅಲ್ಲಿಗೆ ಅವನು ಆಗಾಗ್ಗೆ ಬರುತ್ತಿದ್ದ. ಈ ಕೃತ್ಯ ಎಸಗಿದಾಗಲೆಲ್ಲ ಯಾರಿಗಾದರೂ ಘಟನೆ ಬಗ್ಗೆ ಮಾಹಿತಿ ನೀಡಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದ ಎಂದು ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ನಂತರ ಬಾಲಕಿಯ ಪೋಷಕರು ಬುಧವಾರ ರಾತಿಬಾದ್ ಪೊಲೀಸರನ್ನು ಸಂಪರ್ಕಿಸಿ 21 ವರ್ಷ ವಯಸ್ಸಿನ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ.

ಪೊಲೀಸರು ಆತನ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ವಿದಿಶಾ ಪಟ್ಟಣದವನು. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ಪೊಲೀಸರು ಆರೋಪಿಯನ್ನು ಶೀಘ್ರವೇ ಬಂಧಿಸಲಿದ್ದಾರೆ ಎಂದು ಘಟನೆಯ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read