HomeKarnatakaBREAKING: ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅರೆಸ್ಟ್

BREAKING: ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಪೀಣ್ಯ ಬಳಿ ಇರುವ ಅಂದ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು ಬಂಧಿಸಲಾಗಿದೆ.

ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾಹಿತಿ ಗೊತ್ತಾಗುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೇಳಿಕೆ ಪಡೆದುಕೊಂಡು ಉಪನಿರ್ದೇಶಕರಿಗೆ ವರದಿ ಸಲ್ಲಿಸಿದ್ದರು. ಉಪ ನಿರ್ದೇಶಕರು ವರದಿ ಪಡೆದು ಲಕ್ಷ್ಮಿದೇವಮ್ಮ ಅವರನ್ನು ಅಮಾನತು ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ದೂರಿನ ಅನ್ವಯ ಲಕ್ಷ್ಮಿದೇವಮ್ಮ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ಪುರಾವೆ ಸಂಗ್ರಹಿಸಿ ಅವರನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular