HomeKarnatakaಹಿರೇಕೆರೆ ಒತ್ತುವರಿ ತೆರವು ಮಾಡಲು ಧಾರವಾಡ ಡಿಸಿ ಖಡಕ್ ಸೂಚನೆ

ಹಿರೇಕೆರೆ ಒತ್ತುವರಿ ತೆರವು ಮಾಡಲು ಧಾರವಾಡ ಡಿಸಿ ಖಡಕ್ ಸೂಚನೆ

ಅಳ್ನಾವರ ತಾಲೂಕಿನ ಮೂಲಭೂತ ಸೌಕರ್ಯಗಳ ಉನ್ನತೀಕರಣಕ್ಕೆ ಆದ್ಯತೆ ನೀಡಿ ತಾಲೂಕಿನ ಸಮಗ್ರಭಿವೃದ್ಧಿಗೆ ನಿಲನಕ್ಷೆ ರೂಪಿಸಲಾಗುವುದು ಮತ್ತು ಅಳ್ನಾವರ ಪಟ್ಟಣದ ಹಿರೇಕೆರೆಯ ಒತ್ತುವರಿಯನ್ನು ತೆರವುಗೊಳ್ಳಿಸಿ, ಕೆರೆಯಲ್ಲಿನ ಅಂತರಗಂಗೆ ಸೇರಿದಂತೆ ಮುಳ್ಳು ಕಂಟಿಗಳನ್ನು ತೆಗೆದು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ನಿರ್ದೇಶನ ನೀಡಿದ್ದಾರೆ.

ಅಳ್ಳಾವರ ಪಟ್ಟಣದ ಉಮಾಮಹೆಶ್ವರ ಭವನದಲ್ಲಿ ತಾಲೂಕಾ ಆಡಳಿತದಿಂದ ಆಯೋಜಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ, ಜನರ ಸಮಸ್ಯೆಗಳನ್ನು ಆಲಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

“ಹಿರೇಕೆರೆಯ ಪ್ರದೇಶವನ್ನು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸಿ, ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವ ಜೊತೆಗೆ ಪರಿಸರ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಕೆರೆಯನ್ನು ಸಮರ್ಪಕವಾಗಿ ಸಿದ್ಧಪಡಿಸುವ ಯೋಜನೆ ರೂಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸುವದಾಗಿ” ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರೇಕೆರೆಗೆ ಭೇಟಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸಾರ್ವಜನಿಕ ಸಭೆಯ ನಂತರ ಹಿರೇಕೆರೆಗೆ ಭೇಟಿ ನೀಡಿದರು. ಕೆರೆಯ ಸುತ್ತಮುತ್ತಲಿನ ಒತ್ತುವರಿ ತೆರವು ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಕೆರೆಯ ವ್ಯಾಪ್ತಿ ಗಡಿ ಹಾಗೂ ಭೂ ದಾಖಲೆಗಳ ಬಗ್ಗೆ ಮರು ಸಮೀಕ್ಷೆ ನಡೆಸಿ ನಿಖರ ವರದಿ ಸಲ್ಲಿಸುವಂತೆ ತಿಳಿಸಿದರು. ಕೆರೆ ಪ್ರದೇಶವನ್ನು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸಿ, ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವ ಜೊತೆಗೆ ಪರಿಸರ ಸಂರಕ್ಷಣೆಗೂ ಆದ್ಯತೆ ನೀಡಬೇಕು ಎಂದರು.

ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಪರಿಹಾರ ಒದಗಿಸುವಲ್ಲಿ ಜಿಲ್ಲಾಡಳಿತ ಕ್ರಮ ವಹಿಸುತ್ತದೆ ಹಾಗೂ ಸಾರ್ವಜನಿಕರ ಅಹವಾಲುಗಳು ಕೇವಲ ಅರ್ಜಿ ರೂಪದಲ್ಲಿ ಉಳಿಯದೆ, ಅವುಗಳನ್ನೂ ನಿಗದಿತ ಅವಧಿಯಲ್ಲಿ ಸ್ಪಷ್ಟ ಪರಿಹಾರ ಸಿಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇರುವುದರಿಂದ ಚಿಕಿತ್ಸೆ ಸೇವೆಗೆ ಅಡಚಣೆ ಉಂಟಾಗದಂತೆ ಶೀಘ್ರದಲ್ಲೇ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಇಲಾಖೆವಾರು ವಿಂಗಡಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗುತ್ತದೆ. ಪ್ರತಿಯೊಂದು ಮನವಿಗೂ ನಿಗದಿತ ಅವಧಿಯಲ್ಲಿ ಉತ್ತರ ಮತ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು.

ಅಧಿಕಾರಿಗಳು ಕಚೇರಿಯಲ್ಲಿ ಮಾತ್ರವಲ್ಲದೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಬೇಕು, ಜನಸಾಮಾನ್ಯರೊಂದಿಗೆ ನೇರ ಸಂಪರ್ಕ ಹೆಚ್ಚಿಸಲು ತಿಂಗಳಿಗೆ ಕನಿಷ್ಠ ಒಂದು ಬಾರಿ ಆದರು ತಾಲೂಕು ಮಟ್ಟದಲ್ಲಿ ಸಾರ್ವಜನಿಕ ಸಭೆಗಳನ್ನು ಮಾಡಲಾಗುವುದು ಎಂದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular