HomeLatest Newsಅರಣ್ಯ ಭೂಮಿ ತೆರವು : ಸಚಿವ ಈಶ್ವರ್ ಖಂಡ್ರೆ ಮಹತ್ವದ ಸೂಚನೆ

ಅರಣ್ಯ ಭೂಮಿ ತೆರವು : ಸಚಿವ ಈಶ್ವರ್ ಖಂಡ್ರೆ ಮಹತ್ವದ ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರು ದಿನದಿಂದ ದಿನಕ್ಕೆ ಕಾಂಕ್ರೀಟ್ ಕಾಡಾಗಿ ಮಾರ್ಪಡುತ್ತಿದೆ. ಈ ವೇಗದ ನಗರೀಕರಣದ ಮಧ್ಯೆ, ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಶ್ವಾಸತಾಣಗಳ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಇಂದು ಕಸ್ತೂರಿನಗರದ ಬಿ.ಚನ್ನಸಂದ್ರ ಕೆರೆಯ 2ನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ, ಬಾಣಸವಾಡಿ ವ್ಯಾಪ್ತಿಯ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉತ್ತರ ಬೆಂಗಳೂರಿನ ಬಾಣಸವಾಡಿ ಗ್ರಾಮದ ಸರ್ವೆ ನಂ. 64ರಲ್ಲಿ ಇರುವ 19 ಎಕರೆ 17 ಗುಂಟೆ ಜಮೀನಿನ ಪೈಕಿ 13 ಎಕರೆ 27 ಗುಂಟೆ ಅರಣ್ಯ ಇಲಾಖೆಯ ಸ್ವಾಧೀನದಲ್ಲಿದೆ. ಆದರೆ, ಈ ಪೈಕಿ ಸುಮಾರು 7 ಎಕರೆ ಪ್ರದೇಶವನ್ನು ಅನಧಿಕೃತವಾಗಿ ಇತರ ಉದ್ದೇಶಕ್ಕೆ ಬಳಸಲಾಗುತ್ತಿರುವುದು ದೃಢವಾಗಿದ್ದು, ತಕ್ಷಣವೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಕಿ ಇರುವ 6 ಎಕರೆ 26 ಗುಂಟೆ ಪ್ರದೇಶದಲ್ಲಿ ಈಗಾಗಲೇ ಹೂಳು ತೆರವುಗೊಳಿಸಿ ಸಸಿಗಳನ್ನು ನೆಟ್ಟು, ಸಂರಕ್ಷಣಾ ಕಾರ್ಯ ಆರಂಭಿಸಲಾಗಿದೆ. ಅರಣ್ಯ ಇಲಾಖೆಯ ವ್ಯಾಪ್ತಿಯ ಕೆರೆಗಳನ್ನು ಕಂದಾಯ ದಾಖಲೆಗಳಲ್ಲಿ ‘ಅರಣ್ಯ’ ಎಂದು ಪರಿವರ್ತನೆ ಮಾಡಬೇಕೆಂಬ ಸೂಚನೆ ನೀಡಲಾಗಿದೆ.ಕಸ್ತೂರಿನಗರ ಬಿ.ಚನ್ನಸಂದ್ರ ಕೆರೆಯ ಅಭಿವೃದ್ಧಿಯಲ್ಲಿ ಸ್ಥಳೀಯ ನಾಗರಿಕರ ಪಾತ್ರ ಪ್ರಶಂಸನೀಯವಾಗಿದೆ. ತಮ್ಮ ನಾಡಿನ ಹಸಿರನ್ನು ಕಾಪಾಡಲು ಸಾರ್ವಜನಿಕರು ಸರ್ಕಾರದ ಜೊತೆ ಕೈಜೋಡಿಸಿ ಕೆಲಸ ಮಾಡುವುದು ಅತ್ಯಂತ ಅಗತ್ಯ.

ಈ ಪ್ರದೇಶದ ಕ್ಷೇಮಾಭಿವೃದ್ಧಿ ಸಂಘದ ಮನವಿಯ ಹಿನ್ನೆಲೆಯಲ್ಲಿ, ಈ ವರ್ಷ ಫೆಬ್ರವರಿ 6ರಂದು ಅರಣ್ಯ ಭೂಮಿ ತೆರವುಗೊಳಿಸಲು ನಾವೇ ಲಿಖಿತ ಸೂಚನೆ ನೀಡಿದ್ದೆವು. ಈ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ಹಂತದ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular