HomeKarnatakaBIG NEWS: ಬಟ್ಟೆ ಅಂಗಡಿಯಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತ: ಕುಸಿದುಬಿದ್ದ ಸಿಬ್ಬಂದಿ ಸ್ಥಳದಲ್ಲೇ ಸಾವು!

BIG NEWS: ಬಟ್ಟೆ ಅಂಗಡಿಯಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತ: ಕುಸಿದುಬಿದ್ದ ಸಿಬ್ಬಂದಿ ಸ್ಥಳದಲ್ಲೇ ಸಾವು!

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಬಟ್ಟೆ ಅಂಗಡಿ ಸಿಬ್ಬಂದಿಯೊಬ್ಬ ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಕಂಚಗಾರ ಗಲ್ಲಿಯ ಎನ್.ಆರ್.ಸಾರಿ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ. ಗ್ರಾಹಕರಿಗೆ ವಿವಿಧ ಸಾರಿಗಳನ್ನು ತೋರಿಸುತ್ತಿದ್ದ ಬಟ್ಟೆ ಅಂಗಡಿ ಸಿಬ್ಬಂದಿ ಭುವರ್ ಸಿಂಗ್ ಕುಳಿತಲ್ಲಿಯೇ ಕುಸಿದು ಬಿದ್ದಿದ್ದಾರೆ. ಗ್ರಾಹಕರು ಕಂಗಾಲಾಗಿದ್ದಾರೆ. ತಕ್ಷಣ ಇನ್ನೋರ್ವ ಸಿಬ್ಬಂದಿ ಆತನನ್ನು ಮೇಲಕೆತ್ತಲು ಯತ್ನಿಸಿದರೂ ಎಚ್ಚರಗೊಂಡಿಲ್ಲ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ.

ಹೃದಯಾಘಾತದಿಂದ ಭುವರ್ ಸಿಂಗ್ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular