ಮೈಸೂರು: ಬಟ್ಟೆ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಇಡೀ ಮಳಿಗೆಯೇ ಧಗ ಧಗನೆ ಹೊತ್ತಿ ಉರಿದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.
ಫ್ಯಾಷನ್ಸ್ ಬಟ್ಟೆ ಅಂಗಡಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಬಟ್ಟೆ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನಾಲಿಗೆ ಇಡೀ ಮಳಿಗೆ ಆವರಿಸಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅಂಗಡಿಯಲ್ಲಿದ್ದ ಬಟ್ಟೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಒಂದು ಕೋಟಿಗೂ ಅಧಿಕ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂಗಡಿ ಮಾಲೀಕರು ಕಣ್ಣಿರಿಟ್ಟಿದ್ದಾರೆ.