HomeLatest NewsBREAKING: ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ: ಬರೋಬ್ಬರಿ 1 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

BREAKING: ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ: ಬರೋಬ್ಬರಿ 1 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಮೈಸೂರು: ಬಟ್ಟೆ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಇಡೀ ಮಳಿಗೆಯೇ ಧಗ ಧಗನೆ ಹೊತ್ತಿ ಉರಿದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.

ಫ್ಯಾಷನ್ಸ್ ಬಟ್ಟೆ ಅಂಗಡಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಬಟ್ಟೆ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನಾಲಿಗೆ ಇಡೀ ಮಳಿಗೆ ಆವರಿಸಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅಂಗಡಿಯಲ್ಲಿದ್ದ ಬಟ್ಟೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಒಂದು ಕೋಟಿಗೂ ಅಧಿಕ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂಗಡಿ ಮಾಲೀಕರು ಕಣ್ಣಿರಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular