ಶಾಸಕರ ವಿಶ್ವಾಸ ಗಳಿಸಲು ಸಿಎಂ ಯತ್ನ: ಆ. 22 ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ನಡೆಸಲಿದ್ದಾರೆ.

ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಹೋದ್ಯೋಗಿಗಳು ಬೆಂಬಲ ನೀಡಿದ್ದು, ರಾಜ್ಯದಾದ್ಯಂತ ಅವರ ಪರ ಪ್ರತಿಭಟನೆ ನಡೆದಿದೆ. ಶಾಸಕರ ವಿಶ್ವಾಸ ಗಿಟ್ಟಿಸಲು ಸಿಎಂ ಪ್ರಯತ್ನ ನಡೆಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕರನ್ನು ವಿಶ್ವಾಸಕ್ಕೆ ಪಡೆಯುವ ಯತ್ನ ನಡೆಸಲಿದ್ದಾರೆ ಎನ್ನಲಾಗಿದೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭೆ ಸದಸ್ಯರು ಭಾಗವಹಿಸಲಿದ್ದಾರೆ.

ಮುಡಾ ಹಗರಣ, ರಾಜ್ಯಪಾಲರ ನಡೆ, ಕಾನೂನು ಹೋರಾಟ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿ ಶಾಸಕರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಲು ಸಿಎಂ ಪ್ರಯತ್ನಿಸಲಿದ್ದಾರೆ. ಹೈಕಮಾಂಡ್ ಸೂಚನೆಗಳನ್ನು ಶಾಸಕರಿಗೆ ತಿಳಿಸಲಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ತಿಳಿಸಿ ಹೋರಾಟ ನಡೆಸಲು ಕರೆ ನೀಡಲಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read