HomeKarnatakaಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿದ್ದರಾಮಯ್ಯ ನಾಯಕತ್ವಕ್ಕೆ ಸಂಪೂರ್ಣ ಬೆಂಬಲಿಸಿ ಒಕ್ಕೊರಲ ನಿರ್ಧಾರ

ಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿದ್ದರಾಮಯ್ಯ ನಾಯಕತ್ವಕ್ಕೆ ಸಂಪೂರ್ಣ ಬೆಂಬಲಿಸಿ ಒಕ್ಕೊರಲ ನಿರ್ಧಾರ

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾನೂನು ಹೋರಾಟ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಪರವಾಗಿ ನಿಲ್ಲುವ ಬಗ್ಗೆ ಶಾಸಕಾಂಗ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬೆಂಬಲಿಸಿ ಶಾಸಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಸಚಿವರು ಮುಖ್ಯಮಂತ್ರಿ ಅವರ ಪರವಾಗಿ ನಿಂತಿದ್ದು, ಶಾಸಕರು ಕೂಡ ಸಿಎಂ ಪರವಾಗಿ ನಿಲ್ಲುವ ಸಾಧ್ಯತೆ ಇದೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಪಕ್ಷಗಳಿಗೆ ಟಾರ್ಗೆಟ್ ಆಗಿದ್ದಾರೆ. ಕಾನೂನು ಮತ್ತು ರಾಜಕೀಯ ಹೋರಾಟ ನಡೆಸುತ್ತಿರುವ ಅವರಿಗೆ ಸಚಿವರು, ಪಕ್ಷದ ಸಹೋದ್ಯೋಗಿಗಳು ಬೆಂಬಲ ನೀಡಿದ್ದಾರೆ. ಇದೀಗ ಶಾಸಕರ ಸಂಪೂರ್ಣ ಬೆಂಬಲವಿದೆ ಎಂದು ಸಂದೇಶ ನೀಡಲು ಸಿ.ಎಲ್.ಪಿ. ಸಭೆ ಕರೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಸಂಪುಟದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರದ ವಿರುದ್ಧ ತೀರ್ಮಾನ ಕೈಗೊಂಡ ರೀತಿಯಲ್ಲಿಯೇ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಸಂಪೂರ್ಣ ಬೆಂಬಲ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular