
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಬೆಂಗಳೂರಿನ ಇಂದಿರಾ ಭವನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು.
ಸಭೆಗೆ ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು, ಸಂಸದರು, ರಾಜ್ಯಸಭೆ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ಕ್ವೀನ್ಸ್ ರಸ್ತೆಯ ಇಂದಿರಾಗಾಂಧಿ ಭವನದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವ ಬಗ್ಗೆ, ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು.
