ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಕೊನೆ ಹಂತಕ್ಕೆ ತಲುಪಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂಡ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.
ಇದರ ಬೆನ್ನಲ್ಲೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ದೆಹಲಿಗೆ ತೆರಳಿದ್ದು, ಅಲ್ಲಿಂದ ವಾಪಸಾದ ನಂತರ ಸಿಎಲ್ಪಿ ಸಭೆ ನಡೆಯಲಿದೆ. ಇಂದು ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ಹೈಕಮಾಂಡ್ ನಾಯಕರನು ಭೇಟಿಯಾಗಲಿದ್ದಾರೆ.
ನಾಳೆ ಮೇ 30 ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಸದ್ಯಕ್ಕೆ ಸಭೆಯ ಬಗ್ಗೆ ಕೆಪಿಸಿಸಿಯಿಂದ ಕಾಂಗ್ರೆಸ್ ಶಾಸಕರಿಗೆ ಮಾಹಿತಿ ನೀಡಲಾಗಿದ್ದು, ಎಲ್ಲಾ ಶಾಸಕರು ಬೆಂಗಳೂರಿನಲ್ಲಿಯೇ ಇರುವಂತೆ ಸೂಚಿಸಲಾಗಿದೆ.
ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹೆಸರನ್ನು ಘೋಷಿಸುವ ಸಾಧ್ಯತೆ ಇದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.

