HomeKarnatakaರಾಜ್ಯದ ʻಮಹಿಳಾ ಸ್ವಸಹಾಯ ಸಂಘಗಳಿಗೆʼ ಸಿಎಂ ಗುಡ್ ನ್ಯೂಸ್ : ಪ್ರತಿ ಸಂಘಕ್ಕೆ 1...

ರಾಜ್ಯದ ʻಮಹಿಳಾ ಸ್ವಸಹಾಯ ಸಂಘಗಳಿಗೆʼ ಸಿಎಂ ಗುಡ್ ನ್ಯೂಸ್ : ಪ್ರತಿ ಸಂಘಕ್ಕೆ 1 ಲಕ್ಷ ರೂ ನೆರವು ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ಸ್ವಸಹಾಯ ಸಂಘಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರತಿ ಸ್ವಸಹಾಯ ಸಂಘಕ್ಕೆ 1 ಲಕ್ಷ ರೂ.ಗಳ ನೆರವು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ವಸಹಾಯ ಸಂಘಗಳು ತಯಾರಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಗಾಟಿಸಿ, ಮಾತನಾಡಿದರು. ಪ್ರತಿ ಸ್ವಸಹಾಯ ಸಂಘಕ್ಕೆ 1 ಲಕ್ಷ ರೂ.ಗಳ ನೆರವು ಸರ್ಕಾರ ನೀಡುತ್ತದೆ. 131 ಕೋಟಿ ರೂ.ಗಳನ್ನು ವ್ಯಯ ಮಾಡಿ 12,600 ಗುಂಪುಗಳಿಗೆ ಈ ವರ್ಷ ಸಹಾಯ ಮಾಡಿದ್ದೇವೆ. ಕಳೆದ ವರ್ಷ ವ್ಯಾಪಾರ ಮೇಳದಲ್ಲಿ 3 ಕೋಟಿ ರೂ.ಗಳ ವಹಿವಾಟು ನಡೆದಿದೆ. ಮಹಿಳೆಯರನ್ನು ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದರು.

ಮಾರಾಟ ಹೆಚ್ಚಾದರೆ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಾಗಲು ಸಾಧ್ಯ. ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಕ್ಕು ಅದರಿಂದ ಜೀವನ ನಡೆಯಬೇಕು. ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ವಹಿಸುತ್ತಾರೆ. ಅವರು ಶ್ರಮಜೀವಿಗಳು. ಶೇ 50 ರಷ್ಟಿರುವ ಮಹಿಳೆಯರು ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಮಹಿಳೆಯರು ದೌರ್ಜನ್ಯ, ಶೋಷಣೆಗೆ ಒಳಗಾಗಿರುವ ವರ್ಗ. ಈ ವರ್ಗ ಶಿಕ್ಷಣ ದೊರೆತು ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದ್ದಾರೆ.

ಶಕ್ತಿ ವೃದ್ಧಿ ಮಾಡಲು ವಸ್ತು ಪ್ರದರ್ಶನ ಮಾರಾಟ ಮೇಳಗಳನ್ನು ಸರ್ಕಾರ ಏರ್ಪಾಡು ಮಾಡಿದೆ. ಉದ್ಯೋಗ ಸೃಷ್ಟಿಸಲು ಆರ್ಥಿಕ ನೆರವು, ತರಬೇತಿ, ಸ್ವಯಂ ಉದ್ಯೋಗಕ್ಕೆ ಶಕ್ತಿ ಅಗತ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು. ಸ್ಪರ್ಧಾತ್ಮಕ ಸಮಾಜದಲ್ಲಿ ನಾವೂ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ 3.48 ಲಕ್ಷ ಸ್ವಸಹಾಯ ಸಂಘಗಳಿವೆ. 39.30 ಲಕ್ಷ ಕುಟುಂಬಗಳು ಗ್ರಾಮೀಣ ಜೀವನೋಪಾಯಡಿಯಲ್ಲಿ  ಬರುತ್ತವೆ. ನಗರ ಪ್ರದೇಶದಲ್ಲಿ 33 ಸಾವಿರ ಸ್ವಸಹಾಯ ಸಂಘಗಳಿವೆ. 3.96 ಲಕ್ಷ ಕುಟುಂಬಗಳು ತೊಡಗಿಸಿಕೊಂಡಿವೆ. ಇಷ್ಟೊಂದು ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ಸರ್ಕಾರ ನೀಡಿದೆ ಎಂದರು.

ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣವನ್ನು ನೀಡಿದ್ದು ಮಹಿಳೆಯರು ಮನೆಗಳಿಗೆ ಸೀಮಿತವಾಗದೆ ರಾಜ್ಯದ ಮೂಲೆ ಮೂಲೆಗಳಿಗೂ ಹೋಗಬೇಕು. 100 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಜನ ಮಹಿಳೆಯರು ಬಸ್ಸುಗಳಲ್ಲಿ ಓಡಾಡಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular