HomeKarnatakaಕನ್ನಡ ರಾಜ್ಯೋತ್ಸವ 2023 : 13 ಮಹಿಳೆಯರು ಸೇರಿದಂತೆ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕನ್ನಡ ರಾಜ್ಯೋತ್ಸವ 2023 : 13 ಮಹಿಳೆಯರು ಸೇರಿದಂತೆ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪುದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ. ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2023ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು ಸರ್ಕಾರವು ನಿರ್ಧರಿಸಿ ಆದೇಶ  ಹೊರಡಿಸಿತ್ತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 5 ಲಕ್ಷ ರೂ. ನಗದು, 25 ಗ್ರಾಂ ಚಿನ್ನ ಹಾಗೂ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮಾಡಿದ್ದಾರೆ. ಇಸ್ರೋ ಮುಖ್ಯಸ್ಥ ಸೋಮನಾಥ್, ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ್ ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಇಲಾಖೆ ಸಚಿವ ಡಾ. ಜಿ.ಪರಮೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಉನ್ನತ ಶಿಕ್ಷಣ ಇಲಾಖೆ ಸಚಿವ ಸುಧಾಕರ್ ಮತ್ತಿತರಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular