HomeKarnatakaಬಜರಂಗದಳ ಬ್ಯಾನ್ ಮಾಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಅಧಿಕಾರಕ್ಕೇ ಬರಲ್ಲ: ಸಿಎಂ ಬೊಮ್ಮಾಯಿ

ಬಜರಂಗದಳ ಬ್ಯಾನ್ ಮಾಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಅಧಿಕಾರಕ್ಕೇ ಬರಲ್ಲ: ಸಿಎಂ ಬೊಮ್ಮಾಯಿ

ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಮಾತನಾಡಿದ ಅವರು, ಬಜರಂಗದಳ ಸಾಮಾಜಿಕ, ಧಾರ್ಮಿಕವಾಗಿ ಕೆಲಸ ಮಾಡುವ ಸಂಘಟನೆಯಾಗಿದೆ. ಪಿಎಫ್ಐ ದೇಶ ವಿರೋಧಿ ಕೆಲಸ ಮಾಡಿದೆ. ಭಯೋತ್ಪಾದನೆ ಮಾಡಿದೆ. ಹೀಗಾಗಿ ಪಿಎಫ್ಐ ವಿರುದ್ಧ ಸಾಕಷ್ಟು ಕೇಸುಗಳಿವೆ. ದುಷ್ಕೃತ್ಯಗಳಿಗೆ ಪುರಾವೆಗಳಿವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಷೇಧಿತ ಪಿಎಫ್ಐ ಸಂಘಟನೆಗೆ ಬಜರಂಗದಳ ಹೋಲಿಸುವುದು ಸರಿಯಲ್ಲ. ರಾಜ್ಯ ಸರ್ಕಾರಕ್ಕೆ ಬಜರಂಗದಳ ಬ್ಯಾನ್ ಮಾಡುವ ಅಧಿಕಾರ ಇಲ್ಲ. ಬಜರಂಗದಳ ನಿಷೇಧಿಸುವ ಅಧಿಕಾರ ಇರುವುದು ಕೇಂದ್ರಕ್ಕೆ ಮಾತ್ರ ಎಂದು ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular