HomeKarnatakaಬಿಪಿಎಲ್ ಕುಟುಂಬಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬಿಪಿಎಲ್ ಕುಟುಂಬಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಚಿಕ್ಕಮಗಳೂರು: ಬಿಪಿಎಲ್ ಕುಟುಂಬಗಳಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ತಿಂಗಳು ಹಣಕಾಸಿನ ನೆರವು ನೀಡಲು ‘ಗೃಹಿಣಿ ಶಕ್ತಿ’ ಹೆಸರಲ್ಲಿ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಉತ್ಸವ ಉದ್ಘಾಟನೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಬೀರೂರು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಮತ್ತು ಆರೋಗ್ಯ ಸುಧಾರಣೆ ಸೇರಿದಂತೆ ಅವರ ಉತ್ತಮ ಬದುಕಿಗೆ ಸರ್ಕಾರ ಹಲವು ಯೋಜನೆ ಮೂಲಕ ಸೌಲಭ್ಯ ಕಲ್ಪಿಸುತ್ತಿದ್ದು, ಬಿಪಿಎಲ್ ಕುಟುಂಬಗಳಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ತಿಂಗಳು ಹಣಕಾಸು ನೆರವು ನೀಡಲು ಗೃಹಿಣಿ ಶಕ್ತಿ ಹೆಸರಲ್ಲಿ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ. ಕಂದಾಯ ಸಚಿವರು ಬಿಪಿಎಲ್ ಕುಟುಂಬಗಳಿಗೆ ಮತ್ತಷ್ಟು ಸೌಲಭ್ಯ ದೊರಕಿಸಿಕೊಡಲು ಪ್ರಸ್ತಾಪಿಸಿದ್ದು, ಸಾಧಕ ಬಾಧಕಗಳ ಮಾಹಿತಿ ಪಡೆಯಲಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular