ಫೆ. 17 ರಂದು ಬೆಳಗ್ಗೆ 10.15 ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: 2023 -24 ನೇ ಸಾಲಿನ ಆಯವ್ಯಯವನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಬೆಳಗ್ಗೆ 10:15ಕ್ಕೆ ಮಂಡಿಸಲಿದ್ದಾರೆ.

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಸದನ ಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರ ಪ್ರಕಟಿಸಿದ ಸ್ಪೀಕರ್, ಬುಧವಾರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆಬ್ರವರಿ 16ರಂದು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿ 17ರಂದು ಬೆಳಗ್ಗೆ 10:15ಕ್ಕೆ ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 20, 21ರಂದು ಬಜೆಟ್ ಮೇಲಿನ ಚರ್ಚೆ ನಡೆಯಲಿದ್ದು, ಫೆ. 23 ರಂದು ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read