ಶೇ. 40 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟ ಸರ್ಕಾರಿ ನೌಕರರು: ಒಪ್ಪದ ಸರ್ಕಾರ, ಸಂಧಾನ ಸಭೆ ವಿಫಲ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹಾಗೂ ಸಚಿವರು, ಪದಾಧಿಕಾರಿಗಳು ಚರ್ಚೆ ನಡೆಸಿದ್ದು, ಕೂಡಲೇ ಏಳನೇ ವೇತನ ಆಯೋಗದ ವರದಿಯನ್ನು ಜಾರಿ ಮಾಡಬೇಕೆಂದು ನೌಕರರು ಒತ್ತಾಯಿಸಿದ್ದಾರೆ. ಎನ್‌ಪಿಎಸ್ ಹಿಂಪಡೆದುಕೊಂಡು ಒಪಿಎಸ್ ಜಾರಿ ಮಾಡುಬೇಕು ಎಂದು ತಿಳಿಸಿದ್ದಾರೆ.

7ನೇ ವೇತನ ಆಯೋಗದ ಜಾರಿಗೆ ಮಾತ್ರ ರಾಜ್ಯ ಸರ್ಕಾರ ಸಿದ್ಧವಿದೆ. ಸದ್ಯ ಒಪಿಎಸ್ ಬಗ್ಗೆ ಮಾತನಾಡುವುದು ಬೇಡವೆಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಏಳನೇ ವೇತನದಲ್ಲಿ ಶೇಕಡ 40ರಷ್ಟು ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಶೇಕಡ 40ರಷ್ಟು ವೇತನ ಹೆಚ್ಚಳ ಮಾಡಲು ಆಗಲ್ಲವೆಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಶೇಕಡ 40ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಸರ್ಕಾರಿ ನೌಕರರು ಒತ್ತಾಯಿಸಿದ್ದಾರೆ. ಇಂದೇ ಮಧ್ಯಂತರ ವರದಿ ಧರಿಸಿ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂದು ಪಟ್ಟು ಹಿಡಿದಿದ್ದು, ಆದಷ್ಟು ಬೇಗನೆ ಮಧ್ಯಂತರ ವರದಿ ಧರಿಸಲು ಸಿದ್ಧ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದರೆ, ಶೇಕಡ 7ರಿಂದ 8 ರಷ್ಟು ಮಾತ್ರ ಹೆಚ್ಚಳ ನನ್ನಿಂದ ಸಾಧ್ಯ. ಹಣಕಾಸು ಇಲಾಖೆಯಿಂದ ವರದಿ ಪಡೆಯುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ ಎನ್ನಲಾಗಿದೆ.

ಶೇಕಡ ಏಳರಿಂದ ಎಂಟರಷ್ಟು ವೇತನ ಹೆಚ್ಚಿಸಿದರೆ ಸಾಕಾಗುವುದಿಲ್ಲ ಎಂದು ನೌಕರರು ಹೊರಗೆ ನಡೆದಿದ್ದು, ಅವರ ಮನವೊಲಿಕೆಗೆ. ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್ ಪ್ರಯತ್ನಸಿದ್ದಾರೆ. ಸದ್ಯ ಇದಕ್ಕೆ ಒಪ್ಪಿಕೊಳ್ಳಿ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಹೇಳಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರದ ಹಣಕಾಸು ಪರಿಸ್ಥಿತಿ ಸರಿ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ. ಸಚಿವರ ಮನವೊಲಿಕೆ ನಂತರ ಮುಖ್ಯಮಂತ್ರಿ ಬೊಮ್ಮಾಯಿ ಜೊತೆಗೆ ಮತ್ತೆ ನೌಕರರು ಮಾತುಕತೆ ನಡೆಸಿದ್ದಾರೆ.

ನಿಮ್ಮ ಮನವಿಗೆ ಕೂಡಲೇ ಸ್ಪಂದಿಸಿ ಶೇಕಡ ಏಳರಿಂದ ಎಂಟರಷ್ಟು ವೇತನ ಹೆಚ್ಚಳ ಮಾಡುತ್ತೇನೆ ಎಂದು ಸರ್ಕಾರಿ ನೌಕರರ ಜೊತೆಗಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ ಮಾತನಾಡಿ ತಿಳಿಸುತ್ತೇವೆ ಎಂದು ನೌಕರರ ಸಂಘದ ಪ್ರತಿನಿಧಿಗಳು ಹೇಳಿಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಿಂದ ನಿರ್ಗಮಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read