ಒಕ್ಕಲಿಗ ಸ್ವಾಮೀಜಿ ಬಹಿರಂಗ ಹೇಳಿಕೆ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಪರ ಕಾಂಗ್ರೆಸ್ ಶಾಸಕ ಬ್ಯಾಟಿಂಗ್

ದಾವಣಗೆರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಡಿಸಿಎಂ ಡಿ.ಕೆ. ಪರ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಬ್ಯಾಟಿಂಗ್ ನಡೆಸಿದ್ದಾರೆ.

ಒಕ್ಕಲಿಗ ಸ್ವಾಮೀಜಿ ಬಹಿರಂಗ ಹೇಳಿಕೆ ಬೆನ್ನಲ್ಲೇ ಡಿ.ಕೆ. ಪರವಾಗಿ ಅವರು ಬ್ಯಾಟಿಂಗ್ ನಡೆಸಿದ್ದಾರೆ. ಹತ್ತು ಉಪ ಮುಖ್ಯಮಂತ್ರಿಗಳನ್ನಾದರೂ ಮಾಡಲಿ. ಅದಕ್ಕೂ ಮೊದಲು ಡಿ.ಕೆ. ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಸಂಘಟನೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಉಪ ಮುಖ್ಯಮಂತ್ರಿಯಾಗಿದ್ದಾರೆ. ಜಾತಿಗೊಂದು ಉಪ ಮುಖ್ಯಮಂತ್ರಿ ಮಾಡುವುದಾದರೆ ನಮ್ಮ ಅಭ್ಯಂತರವಿಲ್ಲ. ಡಿ.ಕೆ.ಅವರನ್ನು ಸಿಎಂ ಮಾಡಿದ ನಂತರ ಒಂದು ಡಜನ್ ಡಿಸಿಎಂ ಮಾಡಲಿ ಎಂದು ಹೇಳಿದ್ದಾರೆ.

ಡಿಕೆಶಿಗೆ ಬೆಂಬಲವಿರುವ ಶಾಸಕರ ಹೆಸರು ಪ್ರಸ್ತಾಪಿಸುವುದಿಲ್ಲ. ಎಲ್ಲಾ ಜಾತಿಯವರು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಹಾಗಂತ ಜಾತಿಗೊಂದು ಡಿಸಿಎಂ ಹುದ್ದೆ ನೀಡಲು ಸಾಧ್ಯವೇ? ರಾಜ್ಯದ ಎಲ್ಲಾ ಸಮುದಾಯದ ಸಮರ್ಥ ನಾಯಕನೆಂಬ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ಡಿಸಿಎಂ ಮಾಡಿದೆ. ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡಬಾರದು ಎಂದು ವರಿಷ್ಠರು ಹೇಳಿದ್ದಾರೆ. ಹಿರಿಯರು ಈ ರೀತಿ ಸೂಚನೆ ನೀಡುವಾಗ ನಾವು ಪಾಲಿಸಬೇಕಾಗುತ್ತದೆ ಎಂದು ಬಸವರಾಜ್ ಶಿವಗಂಗಾ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read