HomeKarnatakaBREAKING: ಕೇಸರಿ ಮನೆಯಲ್ಲೂ ಗರಿಗೆದರಿದ ರಾಜಕೀಯ; ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬೊಮ್ಮಾಯಿ ದಿಢೀರ್ ಭೇಟಿ

BREAKING: ಕೇಸರಿ ಮನೆಯಲ್ಲೂ ಗರಿಗೆದರಿದ ರಾಜಕೀಯ; ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬೊಮ್ಮಾಯಿ ದಿಢೀರ್ ಭೇಟಿ

ಬಿ.ಎಸ್. ಯಡಿಯೂರಪ್ಪ ಮನೆಗೆ ಸಿಎಂ ಬೊಮ್ಮಾಯಿ‌ ದೌಡು, ವಸ್ತುಸ್ಥಿತಿ ವಿಚಾರ ವಿನಿಮಯ –

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ರಾಜ್ಯ ರಾಜಕೀಯ ತೀವ್ರ ಕುತೂಹಲದತ್ತ ಸಾಗಿದೆ. ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ನಡೆಸಿರುವ ಬೆನ್ನಲ್ಲೇ ಇತ್ತ ಕೇಸರಿ ಮನೆಯಲ್ಲಿಯೂ ರಾಜಕೀಯ ಗರಿಗೆದರಿದೆ.

ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ತೆರೆಮರೆಯಲ್ಲಿ ತಂತ್ರ ಹೆಣೆಯುತ್ತಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ದಿಢೀರ್ ಭೇಟಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ಸಚಿವ ಭೈರತಿ ಬಸವರಾಜ್ ಸಾಥ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ ನಡೆದಿದ್ದು, ಮುಂದಿನ ತಂತ್ರಗಾರಿಕೆ ಬಗ್ಗೆ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular