ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಮಂಗಳವಾರದಿಂದ ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ಹಣಕಾಸು ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವ ಬಾವಿ ಮೊದಲ ಸಭೆ ನಡೆಸಿದ್ದಾರೆ. ನಂತರ ಇಲಾಖಾವಾರು ಸಭೆ, ರೈತರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳು ಸೇರಿದಂತೆ ಕ್ಷೇತ್ರವಾರು ತಜ್ಞರ ಜೊತೆಗೆ ಸಭೆ ನಡೆಸಲಿದ್ದಾರೆ.
ಜನವರಿ 22 ರಿಂದ 31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ಮೊದಲ ವಾರದಲ್ಲಿ ನಡೆಯುವ ಅಧಿವೇಶನದಲ್ಲಿ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ 16 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ರಾಮಕೃಷ್ಣ ಹೆಗಡೆ(14) ದಾಖಲೆಯನ್ನು ಮುರಿದಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಬಾರಿ 18 ಬಜೆಟ್ ಮಂಡಿಸಿರುವ ದಾಖಲೆ ಗುಜರಾತ್ ನ ವಜೂಭಾಯಿ ವಾಲಾ ಅವರ ಹೆಸರಲ್ಲಿದೆ.

