HomeKarnatakaಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಫೆಬ್ರವರಿ 17 ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಪ್ರಶಕ್ತ ವಿಧಾನಸಭೆಯ ಕೊನೆಯ ಬಜೆಟ್ ಆಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ ಎಲ್ಲಾ ವರ್ಗಗಳಿಗೆ ಕೊಡುಗೆ ನೀಡುವ ನಿರೀಕ್ಷೆ ಇದೆ. ಫೆಬ್ರವರಿ 10ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.

ಇಂದಿನಿಂದ ಮುಖ್ಯಮಂತ್ರಿಗಳು ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಿಸಲಿದ್ದಾರೆ. ಇಲಾಖೆಗಳ ಬೇಡಿಕೆಯ ಬಗ್ಗೆ ಚರ್ಚಿಸಿ ಮನವಿ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನದಿಂದ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಐಟಿ –ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular