HomeKarnataka‘ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ಗರಂ: ಸಿಟ್ಟಾಗಿ...

‘ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ಗರಂ: ಸಿಟ್ಟಾಗಿ ಭಾಷಣ ಮೊಟಕು

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ಗರಂ ಆಗಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ ಭಾಷಣದ ವೇಳೆ ‘ಡಿ ಬಾಸ್’ ಎಂದು ಘೋಷಣೆ ಕೂಗಲಾಗಿದ್ದು, ಇದಕ್ಕೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಮ್ಮ ಭಾವನೆ ಅರ್ಥವಾಗಿದೆ. ಸುಮ್ಮನಿರಿ. ಡಿ ಬಾಸ್ ಕಟ್ಟಿಕೊಂಡೇ ಹೋಗಿ ಎಂದು ಸಿಟ್ಟಾಗಿ ಭಾಷಣ ನಿಲ್ಲಿಸಿದ್ದಾರೆ.

ರಾಮನಗರದಲ್ಲಿ ನಡೆದ ಕರಗ ಕಾರ್ಯಕ್ರಮದಲ್ಲಿ ದರ್ಶನ್ ಅಭಿಮಾನಿಗಳು ಡಿ ಬಾಸ್ ಎಂದು ಘೋಷಣೆ ಕೂಗಿದ್ದು, ನಿಮ್ಮ ಭಾವನೆ ಅರ್ಥ ಆಗಿದೆ. ಎಲ್ಲಾ ಹೇಳಲು ಆಗಲ್ಲ, ಪಬ್ಲಿಕ್ ಆಗಿ ಏನೂ ಹೇಳಲಾಗುವುದಿಲ್ಲ, ಸುಮ್ಮನಿರಿ ಎಂದು ಸಿಎಂ ಡಿ.ಕೆ. ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಪವಿತ್ರ ಸಭೆಯಾಗಿದೆ. ನಿಮ್ಮ ಅಭಿಮಾನ ಗೌರವಿಸುತ್ತೇನೆ. ಕೋರ್ಟ್ ವಿಚಾರದಲ್ಲಿ ನನ್ನ ಮೇಲೆ ಒತ್ತಡ ಹೇರಬೇಡಿ. ನಾನು ಮುಖ್ಯಮಂತ್ರಿ ಆಗಿರಬಹುದು, ಆದರೆ ರಾಮನಗರದ ಮಗ. ಡಿ.ಕೆ. ಶಿವಕುಮಾರ್ ಒತ್ತಡಕ್ಕೆ ಮಣಿಯುತ್ತಿದ್ದಾನೆ ಎನ್ನುತ್ತಾರೆ. ನಾನು ಹೇಗೆ ದೇವರಲ್ಲಿ ಪ್ರಾರ್ಥನೆ ಮಾಡಿದೆನೋ ನೀವು ಹಾಗೆ ದೇವರಲ್ಲಿ ಪ್ರಾರ್ಥನೆ ಮಾಡಿ ಎಂದು ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಅಭಿಮಾನಿಗಳು ಸುಮ್ಮನಾಗದ ಕಾರಣ ಗರಂ ಆಗಿ ಭಾಷಣ ನಿಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular