HomeKarnatakaಸಿಎಂ ಡಿ.ಕೆ. ಶಿವಕುಮಾರ್ ಆಪ್ತ ಸಹಾಯಕನ ಹೆಸರಲ್ಲಿ 15 ಲಕ್ಷ ರೂ. ವಂಚನೆ: ಆರೋಪಿ ಅರೆಸ್ಟ್

ಸಿಎಂ ಡಿ.ಕೆ. ಶಿವಕುಮಾರ್ ಆಪ್ತ ಸಹಾಯಕನ ಹೆಸರಲ್ಲಿ 15 ಲಕ್ಷ ರೂ. ವಂಚನೆ: ಆರೋಪಿ ಅರೆಸ್ಟ್

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡು ಕ್ಲಬ್ ಪರವಾನಗಿ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ವಂಚಿಸಿದ ಆರೋಪಿಯನ್ನು ಶಿವಮೊಗ್ಗದ ತುಂಗಾ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಶರಾವತಿ ನಗರ ನಿವಾಸಿ ಹೇಮಂತ್ ಕುಮಾರ್(30) ಬಂಧಿತ ಆರೋಪಿ. ಶಿವಮೊಗ್ಗದ ಕೆ.ಹೆಚ್.ಬಿ. ಕಾಲೋನಿಯ ರೈತ ಮಂಜುನಾಥ ಹಂಜಿ ಅವರು ನೀಡಿದ ದೂರಿನ ಮೇರೆಗೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕ್ಲಬ್ ಗೆ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿದ್ದ ಹೇಮಂತ್ ಕುಮಾರ್ ಹಂತ ಹಂತವಾಗಿ ಮಂಜುನಾಥ್ ಅವರಿಂದ 15 ಲಕ್ಷ ರೂ. ಹಣ ಪಡೆದಿದ್ದ. ಫೋನ್ ಪೇ ಮೂಲಕ ಮತ್ತು ನಗದು ರೂಪದಲ್ಲಿ ಹಣ ಸ್ವೀಕರಿಸಿದ್ದ ಆತ ಕ್ಲಬ್ ನ ಲೈಸೆನ್ಸ್ ಕೊಡಿಸದೆ ಹಣದೊಂದಿಗೆ ತಲೆಮರೆಸಿಕೊಂಡಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾನು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದ ಆರೋಪಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ. ತಲೆಮರಸಿಕೊಂಡಿದ್ದ ಆರೋಪಿ ಹೇಮಂತ್ ಕುಮಾರ್ ನನ್ನು ಬುಧವಾರ ಕಡೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular