ಹಾಸನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜು.26 ರಂದು ಅರಸೀಕೆರೆಗೆ ಆಗಮಿಸಿ ತಾಲ್ಲೂಕು ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. ಈ ನಿಟ್ಟಿನಲ್ಲಿ ಇಂದು ಅರಸೀಕೆರೆ ತಾಲ್ಲೂಕು ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ವಿವಿಧ ಅಧಿಕಾರಿಗಳು ಹಾಜರಿದ್ದರು.
ಜು.26 ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ
ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜು.26 ರಂದು ಮಧ್ಯಾಹ್ನ 12 ಗಂಟೆಗೆ ಅರಸೀಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಹಾಗೂ ಕಾರ್ಯಕ್ರಮ ಉದ್ಟಾಟಿಸಲಿದ್ದಾರೆ. ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಸ್ಥಿತರಿರುವರು.
ಸಚಿವರಾದ ಕೆ.ಎನ್.ರಾಜಣ್ಣ, ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್, ಹೆಚ್.ಸಿ ಮಹದೇವಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಬಿ.ಜೆಡ್ ಜಮೀರ್ ಅಹಮದ್ ಖಾನ್, ಎನ್. ಚೆಲುವರಾಯಸ್ವಾಮಿ, ರಹೀಂ ಖಾನ್, ಸಂತೋಷ್ ಎಸ್ ಲಾಡ್, ಕೆ.ವೆಂಕಟೇಶ್ ಸೇರಿ ಹಲವರು ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಎಂ.ಪಟೇಲ್, ಶಾಸಕರಾದ ಹೆಚ್.ಡಿ.ರೇವಣ್ಣ, ಡಾ. ಸಿ.ಎನ್.ಬಾಲಕೃಷ್ಣ, ಎ.ಮಂಜು, ಹೆಚ್.ಕೆ.ಸುರೇಶ್, ಸಿಮೆಂಟ್ ಮಂಜು, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಶಾಸಕರಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ|| ಸೂರಜ್ ರೇವಣ್ಣ ಹಾಗೂ ನಗರಸಭೆಯ ಅಧ್ಯಕ್ಷರಾದ ಸಮೀವುಲ್ಲಾ, ಅರಸೀಕೆರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್ ಅರುಣ್‌ಕುಮಾರ್, ಅರಸೀಕೆರೆ ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಧರ್ಮಶೇಖರ್, ಅರಸೀಕೆರೆ ನಗರಸಭೆಯ ಉಪಾದ್ಯಕ್ಷರಾದ ಮನೋಹರ್ ಅವರು ಭಾಗವಹಿಸಲಿದ್ದಾರೆ.