Anna Bhagya Scheme : ‘ಅನ್ನಭಾಗ್ಯ’ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಚಾಲನೆ ನೀಡಿದರು. ಈ ಮೂಲಕ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ.

ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ.
ವಿಶೇಷ ಅಂದರೆ ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಿಸುತ್ತಿದೆ.

2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ. ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಟ್ವೀಟ್

ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ. ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ. ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದಿದ್ದಾರೆ.

https://twitter.com/siddaramaiah/status/1678307785342337024

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read