HomeKarnatakaBIG NEWS : ಧರ್ಮ, ಜಾತಿ, ಯಾವುದೇ ಒತ್ತಡಕ್ಕೆ ಮಣಿಯಬಾರದು : ಅಧಿಕಾರಿಗಳಿಗೆ ಸಿಎಂ ಡಿಕೆ...

BIG NEWS : ಧರ್ಮ, ಜಾತಿ, ಯಾವುದೇ ಒತ್ತಡಕ್ಕೆ ಮಣಿಯಬಾರದು : ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ.!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರು, ರಾಜ್ಯದ ಆಡಳಿತ ಯಂತ್ರವನ್ನು ಬಲಪಡಿಸುವ ಮತ್ತು ಭ್ರಷ್ಟಾಚಾರರಹಿತ ಆಡಳಿತ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.

ಯಾವುದೇ ರಾಜಕೀಯ ಪ್ರಭಾವ ಅಥವಾ ಒತ್ತಡಕ್ಕೆ ಮಣಿಯದೆ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವಂತೆ ಅವರು ಸೂಚನೆ ನೀಡಿದ್ದಾರೆ. ಎಲ್ಲಾ ಇಲಾಖೆಯಲ್ಲಿನ ಬಾಕಿ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿ ನನಗೆ 25 ದಿನದಲ್ಲಿ ವರದಿ ಕೊಡಬೇಕು. ಜಿಲ್ಲೆಯ ಉಸ್ತುವಾರಿ ಸಚಿವರು ಈ ಬಗ್ಗೆ ಗಮನ ಕೊಡಬೇಕು ಎಂದರು. ನನಗೆ ಹಿಸ್ಟರಿ ಬರೆಯೋಕೆ, ಓದೋಕೆ ಇಷ್ಟ ಇಲ್ಲ, ಇತಿಹಾಸ ನಿರ್ಮಾಣ ಮಾಡಬೇಕು ಎಂದರು.

ಸಚಿವರು, ಶಾಸಕರು ಅಥವಾ ಯಾವುದೇ ಪ್ರಭಾವಿ ವ್ಯಕ್ತಿಗಳ ಅನಗತ್ಯ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂದು ಅವರು ತಾಕೀತು ಮಾಡಿದ್ದಾರೆ.ರಾಜ್ಯದಲ್ಲಿ ಪಾರದರ್ಶಕ ಮತ್ತು ಉತ್ತರದಾಯಿತ್ವವಿರುವ ಆಡಳಿತವನ್ನು ಸ್ಥಾಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಅಧಿಕಾರಿಗಳು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಯಾವುದೇ ಭೀತಿಯಿಲ್ಲದೆ ಕೆಲಸ ಮಾಡಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನಪರ ಕೆಲಸಗಳಿಗೆ ಆದ್ಯತೆ: ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂಬ ಕಠಿಣ ನಿಲುವು ತಳೆದಿರುವ ಮುಖ್ಯಮಂತ್ರಿಗಳು, ಸಾರ್ವಜನಿಕ ಕೆಲಸಗಳು ವಿಳಂಬವಾಗದಂತೆ ಮತ್ತು ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ ಎಂದು ನೆನಪಿಸಿದ್ದಾರೆ.

ಕರ್ತವ್ಯಪಾಲನೆಗೆ ಕಟ್ಟುನಿಟ್ಟಿನ ಸೂಚನೆ: ತಮ್ಮ ಕಾರ್ಯಕ್ಷೇತ್ರದಲ್ಲಿ ಅಧಿಕಾರಿಗಳು ಲಭ್ಯವಿರಬೇಕು ಮತ್ತು ಕಚೇರಿ ಕೆಲಸದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಈ ಹಿಂದಿನಿಂದಲೂ ಅವರು ಸೂಚಿಸುತ್ತಾ ಬಂದಿದ್ದು, ಅದನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular