ಮೈಸೂರು: ರಾಜ್ಯಾದ್ಯಂತ ಕುರಿಗಾಹಿಗಳನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ನೀಡವ ಮೂಲಕ ಸೂಕ್ತ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು.
ಈ ನಿಟ್ಟಿನಲ್ಲಿ ಕುರಿಗಾಹಿಗಳಿಗೆ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಿದ ಸಿಎಂ, ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಿ ಕೃಷಿ ಉತ್ಪನ್ನ ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನಮ್ಮದು ರೈತಪರ ಸರ್ಕಾರ ಎಂದು ಹೇಳಿದ್ದಾರೆ.
ನಾವು ನೀಡಿದಾಗ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.
ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ₹439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ, ಬಳಿಕ ಸಾವಿರಾರು ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿ, ಅದೇ ವೇದಿಕೆಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ – ಬಾಬು ಜಗಜೀವನ್ ರಾಮ್ ಅವರ ಜನ್ಮ… pic.twitter.com/gyQYrmE0Mt
— Siddaramaiah (@siddaramaiah) April 26, 2025
ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300 ಕ್ಕೂ ಹೆಚ್ಚು ರೈತರಿಗೆ ₹100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ.
— Siddaramaiah (@siddaramaiah) April 26, 2025
ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ… pic.twitter.com/UXENwh97wc