HomeLatest NewsBIG NEWS: ಸಿಎಂ ಮನೆಗೂ ಬಾಂಬ್ ಇಡುವುದಾಗಿ ಬೆದರಿಕೆ ಸಂದೇಶ

BIG NEWS: ಸಿಎಂ ಮನೆಗೂ ಬಾಂಬ್ ಇಡುವುದಾಗಿ ಬೆದರಿಕೆ ಸಂದೇಶ

ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಸಿಎಂ ನಿವಾಸಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ.

ಕೋರಮಂಗಲದಲ್ಲಿರುವ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಸಂದೇಶ ರವಾನಿಸಲಾಗಿದೆ. ಇದೇ ಸಂದೇಶದಲ್ಲಿ ಸಿಎಂ ನಿವಾಸಕ್ಕೂ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ದಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಂ ಸಲ್ಫರ್ ಬೇಸ್ಡ್ ಐಇಡಿ ಬಳಸಿ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ. ಕಸಬ್ ನನ್ನು ಗಲ್ಲಿಗೇರಿಸಿದ್ದಕ್ಕೆ ಪ್ರತಿಕಾರವಾಗಿ ಈ ದಾಳಿ ಎಂದಿ ಇ-ಮೇಲ್ ಸಂದೇಶದಲ್ಲಿ ತಿಳಿಸಲಾಗಿದೆ.

ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಪಾಸ್ ಪೋರ್ಟ್ ಕಚೇರಿ, ಸಿಎಂ ನಿವಾಸಕ್ಕೆ ತೆರಳಿ ತಪಾಸಣೆ, ಪರಿಶೀಲನೆ ನಡೆಸಿದೆ. ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular