BIG NEWS: ಮುಡಾ ಹಗರಣದ ತೀರ್ಪು ಹಿನ್ನೆಲೆ: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಣವಾಗಲಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದರಾಮಯ್ಯ ಭವಿಷ್ಯ ನಿರ್ಧರವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಿಂದ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಕಟ್ತೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲಿಸರು ಅಲರ್ಟ್ ಆಗಿದ್ದು, ಪ್ರಮುಖವಾಗಿ ಸಿಎಂ ಕಾವೇರಿ ನಿವಾಸದ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. 2 ಕೆ ಎಸ್ ಆರ್ ಪಿ ತುಕಡಿ, ಬಿಎಂಟಿಸಿ ಬಸ್ ಗಳನ್ನು ನಿಯೋಜಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read