‘ಹಿಜಾಬ್’ ವಿಷಯ ಪ್ರಸ್ತಾಪಿಸಿ ಸಿಎಂ ಜನರ ದಿಕ್ಕು ತಪ್ಪಿಸಲು ಹೊರಟಿದ್ದಾರೆ : ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು : ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ. ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಇನ್ನು ಎಷ್ಟು ಬಡ ವಿದ್ಯಾರ್ಥಿಗಳ ಶೋಷಣೆಯಾಗಬೇಕು.?

ಮಾಲೂರಿನ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗಿಳಿಸಿದ ಘಟನೆಯ ಬೆನ್ನಲ್ಲೆ ಯಶವಂತಪುರ ವಿಧಾನಸಭೆ ಕ್ಷೇತ್ರದ ಅಂದ್ರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಶುಚಿಗೊಳಿಸಿದ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನು ಎಷ್ಟು ಬಡ ವಿದ್ಯಾರ್ಥಿಗಳ ಶೋಷಣೆಯಾಗಬೇಕು ಮುಖ್ಯಮಂತ್ರಿ ನವರೇ? ಈ ರೀತಿ ಮಕ್ಕಳ ಶೋಷಣೆ, ಬವಣೆ ಇನ್ನು ಅದೆಷ್ಟು ಶಾಲೆಗಳಲ್ಲಿ ನಡೆಯುತ್ತಿದೆಯೋ ಏನೋ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೋ ಅಥವಾ ಸತ್ತಿದೆಯೋ ಎಂದು ಜನರಲ್ಲಿ ಅನುಮಾನ ಮೂಡುತ್ತಿದೆ ಎಂದು ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

https://twitter.com/RAshokaBJP/status/1738408361568416014

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read