HomeKarnatakaಫೆ. 8 ರಂದು ʻಸಿಎಂ ಜನಸ್ಪಂದನʼ ಕಾರ್ಯಕ್ರಮ : ಈ ಸಮಸ್ಯೆಗಳಿಗೆ ಸಿಗಲಿದೆ ಸ್ಥಳದಲ್ಲೇ ಪರಿಹಾರ

ಫೆ. 8 ರಂದು ʻಸಿಎಂ ಜನಸ್ಪಂದನʼ ಕಾರ್ಯಕ್ರಮ : ಈ ಸಮಸ್ಯೆಗಳಿಗೆ ಸಿಗಲಿದೆ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ‘ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮ’ ನಡೆಸುತ್ತಿದ್ದಾರೆ. ಇದೇ ಗುರುವಾರ ಫೆಬ್ರವರಿ 08ರಂದು ವಿಧಾನಸೌಧದ ಮುಂಭಾಗ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ತಮ್ಮ ಕುಂದುಕೊರತೆಗಳಿಗೆ ಶೀಘ್ರ ಪರಿಹಾರ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸಂಪೂರ್ಣ ಲಾಭ ಪಡೆಯಿರಿ. ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ತುರ್ತಾಗಿ ಸೂಕ್ತ ಪರಿಹಾರ ಸಿಗಲಿದೆ.

ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular