HomeKarnatakaBIG NEWS: ಇ-ಖಾತಾ ಪ್ರಕ್ರಿಯೆ ತೊಡಕು ನಿವಾರಣೆಗೆ ಸಿಎಂ ಸೂಚನೆ: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

BIG NEWS: ಇ-ಖಾತಾ ಪ್ರಕ್ರಿಯೆ ತೊಡಕು ನಿವಾರಣೆಗೆ ಸಿಎಂ ಸೂಚನೆ: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು.

ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.

ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ:

ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ.

ಈ ವರ್ಷದ ಒಟ್ಟು ರಾಜಸ್ವ ಗುರಿ 9 ಸಾವಿರ ಕೋಟಿ ರೂ. ಇದ್ದು, ನವೆಂಬರ್ ಅಂತ್ಯದವರೆಗೆ 4,862 ಕೋಟಿ ರೂ.ರಾಜಸ್ವ ಸಂಗ್ರಹಿಸಲಾಗಿದೆ.

ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ ವಹಿಸಬೇಕು.

2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮ ವಹಿಸುವಂತೆ ಸೂಚಿಸಲಾಯಿತು.

ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿ೦ದ ಕಾರ್ಯ ನಿರ್ವಹಿಸಬೇಕು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular