ಬೆಂಗಳೂರು: ರಾಜ್ಯದಲ್ಲಿ ಓಸಿ ಮತ್ತು ಸಿಸಿ ಇಲ್ಲದ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡುವ ಬಗ್ಗೆ ಅ. 8ರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಓಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಎ ಖಾತಾ ಮತ್ತು ಬಿ ಖಾತಾ ಪ್ರಕ್ರಿಯೆ ವಿಳಂಬವಾಗುತ್ತಿರುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು. ಎ ಖಾತಾ ಮತ್ತು ಬಿ ಖಾತಾ ವಿಚಾರದಲ್ಲಿ ಕ್ರಾಂತಿಕಾರಿ ಕೆಲಸಗಳಾಗಿವೆ ಎಂದು ತಿಳಿಸಿದ್ದಾರೆ.
ನಗರದಾದ್ಯಂತ ಎಲ್ಲೆಂದರಲ್ಲಿ ಕೇಬಲ್ ಎಳೆಯಲಾಗಿದ್ದು, ಬೆಸ್ಕಾಂಗೆ ಸೇರಿದ ಕಂಬಗಳಲ್ಲಿ ಟಿವಿ ಕೇಬಲ್ ನೇತಾಡುತ್ತಿವೆ. ಈ ಸಮಸ್ಯೆ ಬಗೆಹರಿಸಲು ಇಂಧನ ಸಚಿವರೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.